ದಾವಣಗೆರೆ: ಪಂಚಮಸಾಲಿ ಸಮಾಜವನ್ನು 2ಎಗೆ ಸೇರ್ಪಡೆ ಮಾಡಬೇಕು. ಇಲ್ಲದಿದ್ದರೆ ಸಮಾಜದ ಮಹಿಳೆಯರೆಲ್ಲಾ ಸೇರಿಕೊಂಡು ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದು ಪಂಚಮಸಾಲಿ ಸಮಾಜದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ವೀಣಾ ಕಾಶಪ್ಪನವರ್ ಎಚ್ಚರಿಸಿದ್ದಾರೆ.
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ವೀಣಾ ಕಾಶಪ್ಪನವರ್ ಒತ್ತಾಯಿಸಿದರು ನಗರದಲ್ಲಿ ಮಾಧ್ಯಮಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೀಸಲಾತಿ ಪಡೆಯುವುದು ನಮ್ಮ ಹಕ್ಕು. ಯಡಿಯೂರಪ್ಪ ಸಿಎಂ ಆಗಲು ನಮ್ಮ ಸಮಾಜದ ಬಹುಪಾಲು ಕೊಡುಗೆ ಇದೆ. ಸಿಎಂ ಅವರಿಗೆ ಪರಮಾಧಿಕಾರ ಇದೆ. ಬೇಡಿಕೆ ಈಡೇರಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದರು.
ಓದಿ:ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯೋಣ : ಡಿಸಿಎಂ ಅಶ್ವತ್ಥ್ ನಾರಾಯಣ್
ಪಂಚಮಸಾಲಿ ಸಮಾಜದಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯ ಇಲ್ಲ. ಎಲ್ಲರೂ ಒಟ್ಟಾಗಿದ್ದೇವೆ. ನಮ್ಮ ಸಮಾಜದವರೇ ಮುಖ್ಯಮಂತ್ರಿ ಇದ್ದಾರೆ. ಪಾದಯಾತ್ರೆ ದಾವಣಗೆರೆ ದಾಟುವುದರೊಳಗೆ ಮೀಸಲಾತಿ ಘೋಷಣೆ ಮಾಡಬೇಕು. ಒಂದು ವೇಳೆ ಇದು ಆಗದಿದ್ದರೆ, ಸಮಾಜದ ಮಹಿಳೆಯರು ಒಂದು ದಿನದ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.