ಹರಿಹರ: ಹೊಸಳ್ಳಿಯ ಶ್ರೀ ಮಹಾಯೋಗಿ ಸಂಸ್ಥಾನ ವೇಮನ ಮಠಕ್ಕೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಭೇಟಿ ನೀಡಿ ಶ್ರೀ ವೇಮನಾನಂದ ಮಹಾಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು.
ವೇಮನ ಮಠಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭೇಟಿ - Minister Laxman Sawadi visits Veyman Math
ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ವೇಮನ ಮಠಕ್ಕೆ ಭೇಟಿ ನೀಡಿ ಶ್ರೀ ವೇಮನಾನಂದ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆದರು.
ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ
ತಾಲೂಕಿನ ಹೊಸಳ್ಳಿ ಗ್ರಾಮದ ಹೊರವಲಯದಲ್ಲಿರುವ ವೇಮನ ಮಠಕ್ಕೆ ಬುಧವಾರ ಮಧ್ಯಾಹ್ನ ಆಗಮಿಸಿದ ಸಚಿವರು, ಮಹಾಸ್ವಾಮೀಜಿಗಳಿಂದ ಆಶೀರ್ವಾದ ಪಡೆದು ಮಠದಲ್ಲಿ ನಿರ್ಮಾಣವಾಗುತ್ತಿರುವ ಕಾಮಗಾರಿಗಳು ಮತ್ತು ಶಾಲೆಯ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಚಿತ್ರದುರ್ಗದ ವನಶ್ರೀ ಪೀಠದ ಬಸವಕುಮಾರ ಶ್ರೀಗಳು, ರಾಣೆಬೆನ್ನೂರಿನ ಸಿದ್ಧಾರೂಢ ಮಠದ ಮರುಳು ಶಂಕರ ಶ್ರೀಗಳು ಹಾಗೂ ಬಿಜೆಪಿ ಜಿಲ್ಲಾ ಅಧ್ಯಕ್ಷ ವೀರೇಶ್ ಹನಗವಾಡಿ ಉಪಸ್ಥಿತರಿದ್ದರು.