ಕರ್ನಾಟಕ

karnataka

ETV Bharat / state

ಧಾರವಾಡ ಗ್ರಾಮ ಸಮರ: ಅಂತಿಮವಾಗಿ 2,748 ಅಭ್ಯರ್ಥಿಗಳು ಕಣದಲ್ಲಿ

ಧಾರವಾಡ ಜಿಲ್ಲೆಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಉಮೇದುವಾರಿಕೆ ಸಲ್ಲಿಸಿದ್ದ ಅಭ್ಯರ್ಥಿಗಳ ಪೈಕಿ 47 ಕ್ಷೇತ್ರಗಳ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಇನ್ನು ಒಟ್ಟಾರೆಯಾಗಿ 2748 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​​ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಜಿಲ್ಲಾಧಿಕಾರಿ ನಿತೇಶ್ ಪಾಟೀಲ

By

Published : Dec 15, 2020, 7:38 PM IST

ಧಾರವಾಡ:ಮೊದಲ ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಯುವ ಧಾರವಾಡ, ಅಳ್ನಾವರ, ಕಲಘಟಗಿ ತಾಲೂಕುಗಳಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಉಮೇದುವಾರಿಕೆ ಸಲ್ಲಿಸಿದ್ದ ಅಭ್ಯರ್ಥಿಗಳ ಪೈಕಿ 47 ಕ್ಷೇತ್ರಗಳ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಅಂತಿಮವಾಗಿ 2748 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ, ಕಲಘಟಗಿ ಮತ್ತು ಅಳ್ನಾವರ ತಾಲೂಕಿನ ಒಟ್ಟು ಕ್ರಮಬದ್ಧ 3,096 ನಾಮಪತ್ರಗಳ ಪೈಕಿ 47 ಜನ ಅವಿರೋಧ ಆಯ್ಕೆಯಾಗಿದ್ದಾರೆ. 302 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದಿದ್ದಾರೆ. ಅಂತಿಮವಾಗಿ ಚುನಾವಣಾ ಕಣದಲ್ಲಿ 2,748 ಅಭ್ಯರ್ಥಿಗಳು ಉಳಿದಿದ್ದಾರೆ ಎಂದು ತಿಳಿಸಿದ್ದಾರೆ.

ಮೂರು ತಾಲೂಕಿನ ಒಟ್ಟು 65 ಗ್ರಾಮ ಪಂಚಾಯತ್‍ಗಳ 542 ಕ್ಷೇತ್ರಗಳಲ್ಲಿನ ಖಾಲಿ ಇರುವ 920 ಸ್ಥಾನಗಳಿಗೆ ಚುನಾವಣೆ ಜರುಗಲಿದೆ. ಧಾರವಾಡ ತಾಲೂಕಿನ 1805 ಕ್ರಮಬದ್ಧ ನಾಮಪತ್ರಗಳ ಪೈಕಿ 30 ಜನ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು, 173 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದಿದ್ದಾರೆ. ಒಟ್ಟು 1602 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.

ಕಲಘಟಗಿ ತಾಲೂಕಿನ 1115 ಕ್ರಮಬದ್ಧ ನಾಮಪತ್ರಗಳ ಪೈಕಿ 16 ಜನ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು, 110 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದಿದ್ದಾರೆ. ಒಟ್ಟು 989 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಅಳ್ನಾವರ ತಾಲೂಕಿನ 176 ಕ್ರಮಬದ್ಧ ನಾಮಪತ್ರಗಳ ಪೈಕಿ ಒಬ್ಬ ಅಭ್ಯರ್ಥಿಯು ಅವಿರೋಧ ಆಯ್ಕೆಯಾಗಿದ್ದು, 19 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದಿದ್ದಾರೆ. ಒಟ್ಟು 157 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.

ಅಂತಿಮ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳಿಗೆ ರಾಜ್ಯ ಚುನಾವಣಾ ಆಯೋಗವು ಸೂಚಿಸಿರುವ ನಿಯಮಗಳನುಸಾರ ಈಗಾಗಲೇ ಚುನಾವಣಾ ಚಿಹ್ನೆಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details