ಕರ್ನಾಟಕ

karnataka

ETV Bharat / state

ಸೊಕ್ಕೆ ಗ್ರಾಮದಲ್ಲೊಂದು ಹೈ - ಟೆಕ್ ಗ್ರಂಥಾಲಯ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕ ವ್ಯವಸ್ಥೆ - Digital library at davanagere

ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ದಾವಣಗೆರೆ ಜಿಲ್ಲೆಯ ಜಗಳೂರು ಸೊಕ್ಕೆ ಗ್ರಾಮ ಪಂಚಾಯತಿಯಲ್ಲಿ ಡಿಜಿಟಲ್ ಗ್ರಂಥಾಲಯವನ್ನು ನಿರ್ಮಾಣ ಮಾಡಲಾಗಿದೆ. ಇಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾದ ಪುಸ್ತಕಗಳು,ಇತರ ಪುಸ್ತಕಗಳು ಲಭ್ಯವಿದೆ.

digital-library-at-sokke-gramapanchayath-davanagere
ಸೊಕ್ಕೆ ಗ್ರಾಮದಲ್ಲೊಂದು ಹೈ-ಟೆಕ್ ಗ್ರಂಥಾಲಯ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕ ವ್ಯವಸ್ಥೆ

By

Published : Jul 6, 2022, 6:08 PM IST

ದಾವಣಗೆರೆ : ಗ್ರಾಮೀಣ ಭಾಗದಲ್ಲಿ ಸಾಕಷ್ಟು ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವುದು ಸಾಮಾನ್ಯ. ಆದರೆ, ಪರೀಕ್ಷೆಗಳಿಗೆ ತಯಾರಿ ನಡೆಸಲು ಬೇಕಾದ ಪುಸ್ತಕಗಳು , ಗ್ರಂಥಾಲಯಗಳ ಲಭ್ಯತೆ ಮಾತ್ರ ಮರೀಚಿಕೆಯಾಗಿರುತ್ತದೆ. ಆದರೆ, ಇಲ್ಲೊಂದು ಗ್ರಾಮ ಪಂಚಾಯಿತಿ ಸುಸಜ್ಜಿತವಾದ ಗ್ರಂಥಾಲಯ ತೆರೆದು ಪರೀಕ್ಷಾರ್ಥಿಗಳಿಗೆ ಬೇಕಾಗುವ ಪುಸ್ತಕಗಳನ್ನು ಒದಗಿಸುತ್ತಿದೆ. ಇಲ್ಲಿನ ಗ್ರಾಮ ಪಂಚಾಯಿತಿ ಭ್ರಷ್ಟಾಚಾರದ ಕೂಪವಾಗದೇ ವಿದ್ಯಾ ಕೇಂದ್ರವಾಗಿ, ಬಡ ವಿದ್ಯಾರ್ಥಿಗಳ ದಾರಿದೀಪವಾಗಿದೆ.

ಸೊಕ್ಕೆ ಗ್ರಾಮದಲ್ಲೊಂದು ಹೈ-ಟೆಕ್ ಗ್ರಂಥಾಲಯ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕ ವ್ಯವಸ್ಥೆ

ಜಿಲ್ಲೆಯ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ, ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಹಾಗೂ ಗ್ರಾಮಸ್ಥರ ಶ್ರಮದಿಂದ ಸುಸಜ್ಜಿತ ಗ್ರಂಥಾಲಯ ನಿರ್ಮಾಣ ಮಾಡಲಾಗಿದೆ. ಈ ಗ್ರಂಥಾಲಯದಲ್ಲಿ ವಿವಿಧ ಸಾಹಿತಿಗಳ ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾಗುವ ಪುಸ್ತಕಗಳನ್ನು ಸಂಗ್ರಹ ಮಾಡಲಾಗಿದ್ದು, ಸೊಕ್ಕೆ ಗ್ರಾಮ ಒಂದೇ ಅಲ್ಲದೇ ಸುತ್ತಮುತ್ತಲಿನ ಸ್ಪರ್ಧಾತ್ಮಕ ಪರೀಕ್ಷೆ ಗಳನ್ನು ಬರೆಯುವ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದೆ.

ಈ ಗ್ರಂಥಾಲಯದಲ್ಲಿ ಐಎಎಸ್ , ಕೆಎಎಸ್ ಅಭ್ಯರ್ಥಿ ಗಳಿಗೆ ಓದಲು ಬೇಕಾದ ನೂರಾರು ಪುಸ್ತಕಗಳನ್ನು ಸಂಗ್ರಹಿಸಿಡಲಾಗಿದೆ. ಈ ಗ್ರಂಥಾಲಯದಲ್ಲಿ ಕಂಪ್ಯೂಟರ್ ಮತ್ತು ಅಂತರ್ಜಾಲ ಸೌಲಭ್ಯಗಳಿದ್ದು, ಇ ಲೈಬ್ರರಿ ಮೂಲಕ ಪುಸ್ತಕಗಳನ್ನು ಪಡೆದುಕೊಳ್ಳಬಹುದು.

ಇಲ್ಲಿರುವ ಮೂರು ಕಂಪ್ಯೂಟರ್ ಗಳಲ್ಲಿ ಇ ಲೈಬ್ರರಿ ಕೂಡ ಅಳವಡಿಕೆ ಮಾಡಲಾಗಿದ್ದು, ಲಕ್ಷಾಂತರ ಪುಸ್ತಕಗಳು ಇಲ್ಲಿ ಲಭ್ಯವಿದೆ. ಪಿಡಿಒ, ಬ್ಯಾಂಕ್, ಕಾನ್ಸ್​ಟೇಬಲ್​, ಐಪಿಎಸ್, ಐಎಎಸ್ ,ಕೆಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷಗಳಿಗ ಪುಸ್ತಕಗಳು ಸಿಗುವಂತೆ ಮಾಡಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳು ಯಾವುದಾದರೂ ಸ್ಪರ್ಧಾತ್ಮಕ ಪುಸ್ತಕಗಳು ಬೇಕು ಎಂದರೆ ತರಿಸಿಕೊಡುವ ಕೆಲಸವನ್ನು ಪಂಚಾಯಿತಿ ಅಧಿಕಾರಿಗಳು ಮಾಡುತ್ತಿದ್ದಾರೆ.

ಈ ರೀತಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಅನುದಾನವನ್ನು ಬಳಸಿ ಒಂದು ಗ್ರಂಥಾಲಯ ನಿರ್ಮಾಣ ಮಾಡಿದರೆ ಬಡ ವಿದ್ಯಾರ್ಥಿಗಳ ಕಲಿಕೆಗೂ ಕೂಡ ಅನುಕೂಲವಾಗುತ್ತದೆ.

ಓದಿ :ಸಿದ್ದರಾಮಯ್ಯ ಭೇಟಿ ಮಾಡಿದ ವೀರೇಶ ಸೊಬರದಮಠ ನೇತೃತ್ವದ ರೈತರ ನಿಯೋಗ

For All Latest Updates

ABOUT THE AUTHOR

...view details