ದಾವಣಗೆರೆ :ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಿರುವ ಮುರುಘಾ ಮಠವೂ ಬಡವರಿಗೆ ದವಸ ಧಾನ್ಯಗಳನ್ನು ವಿತರಿಸಿತು.
ನಗರದ ಜಯದೇವ ವೃತ್ತದಲ್ಲಿರುವ ಮುರುಘಾ ಮಠದಲ್ಲಿ ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ದವಸ ಧಾನ್ಯಗಳ ಕಿಟ್ನ ವಿತರಿಸಿದರು. ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನಮಂತರಾಯ ಸೇರಿ ವಿವಿಧ ಸಮಾಜದ ಮುಖಂಡರು ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಮುರುಘಾ ಶ್ರೀಗಳು, ಇದಕ್ಕೂ ಮೊದಲು ಸಾಮಾಜಿಕ ಅಂತರ ಬೇಡ ಎನ್ನುತ್ತಿದ್ದರು.