ದಾವಣಗೆರೆ:ಜಿಲ್ಲೆಯಲ್ಲಿ ಬಿಜೆಪಿಯ ಆರು ಶಾಸಕರಿದ್ದು, ಒಬ್ಬರಿಗಾದರೂ ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ನೀಡುವಂತೆ ಜಿಲ್ಲಾ ಬಿಜೆಪಿಯು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದೆ.
ದಾವಣಗೆರೆಯ ಆರು ಮಂದಿ ಪೈಕಿ ಒಬ್ಬ ಶಾಸಕರಿಗಾದರೂ ಸಚಿವ ಸ್ಥಾನ ನೀಡುವಂತೆ ಒತ್ತಾಯ...! - District BJP unit appeal to cm to give a minister
ದಾವಣಗೆರೆ ಜಿಲ್ಲೆಯಲ್ಲಿ ಆರು ಶಾಸಕರು ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಅದರಲ್ಲಿ ಒಬ್ಬರಿಗಾದರೂ ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ನೀಡುವಂತೆ ಜಿಲ್ಲಾ ಬಿಜೆಪಿ ಘಟಕ ಒತ್ತಾಯಿಸಿದೆ.
district-bjp-unit-appeal-to-cm-to-give-a-minister
ಈ ಸಂಬಂಧ "ಈಟಿವಿ ಭಾರತ' ಜೊತೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಜಿಲ್ಲೆಯಲ್ಲಿ ಆರು ಶಾಸಕರು ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಜಿಲ್ಲೆಗೆ ಸಚಿವ ಸ್ಥಾನ ನೀಡುವ ಮೂಲಕ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಲೋಕಸಭಾ ಸದಸ್ಯ ಜಿ. ಎಂ. ಸಿದ್ದೇಶ್ವರ್ ಅವರು ಈಗಾಗಲೇ ಯಡಿಯೂರಪ್ಪ ಅವರ ಜೊತೆ ಮಾತನಾಡಿದ್ದಾರೆ. ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದು, ಇದಕ್ಕೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಯಾರಿಗಾದರೂ ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿರುವುದಾಗಿ ಯಶವಂತರಾವ್ ಜಾಧವ್ ತಿಳಿಸಿದ್ದಾರೆ.