ಹರಿಹರ:ಕೊರೊನಾ ಸೋಂಕು ಇರುವ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಹಾಗೂ ಸ್ವಚ್ಛತೆ ಇಲ್ಲದೇ ಕಸದ ರಾಶಿ ಎಲ್ಲೆಂದರಲ್ಲಿ ಬಿದ್ದಿರುವುದನ್ನು ಕಂಡ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ನಗರಸಭೆ ಮತ್ತು ತಾಲೂಕು ಆಡಳಿತದ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.
ಕೊರೊನಾ ನಿಯಂತ್ರಣದಲ್ಲಿ ನಿರ್ಲಕ್ಷ್ಯ: ತಾಲೂಕಾಡಳಿತಕ್ಕೆ ಜಿಲ್ಲಾಧಿಕಾರಿ ತರಾಟೆ
ಕೊರೊನಾ ಸೋಂಕು ಇರುವ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಹಾಗೂ ಸ್ವಚ್ಛತೆ ಇಲ್ಲದೇ ಕಸದ ರಾಶಿ ಎಲ್ಲೆಂದರಲ್ಲಿ ಬಿದ್ದಿರುವುದನ್ನು ಕಂಡ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ನಗರಸಭೆ ಮತ್ತು ತಾಲೂಕು ಆಡಳಿತದ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.
ನಗರಸಭೆ ಮತ್ತು ತಾಲೂಕು ಆಡಳಿತದ ಅಧಿಕಾರಿಗಳಿಗೆ ತರಾಟೆ
ನಗರಕ್ಕೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ನಗರಸಭೆಯ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಗಾಂಧೀನಗರದ ಕಂಟೈನ್‌ಮೆಂಟ್ ಪ್ರದೇಶಕ್ಕೆ ಆಗಮಿಸಿ ಅಲ್ಲಿನ ನಿವಾಸಗಳ ಯೋಗಕ್ಷೇಮ ವಿಚಾರಿಸಿದರು.
ಈ ವೇಳೆ ಅಲ್ಲಿಯೇ ಇದ್ದ ಕಸದ ರಾಶಿಯನ್ನು ನೋಡಿ ಸೋಂಕಿತರು ಇರುವ ಸ್ಥಳವನ್ನು ಯಾವ ರೀತಿ ಇಟ್ಟುಕೊಳ್ಳಬೇಕು? ಎಂದು ನಗರಸಭೆ ಅಧಿಕಾರಿಗಳನ್ನು ಪ್ರಶ್ನಿಸಿದರು. ಕೂಡಲೇ ಈ ಬಡಾವಣೆಯನ್ನು ಸ್ವಚ್ಛಗೊಳಿಸಬೇಕು, ಇಲ್ಲವಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.