ಹರಿಹರ (ದಾವಣಗೆರೆ):ನಗರದ ಭಾಗೀರಥಿ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ನಗರಸಭೆ ವತಿಯಿಂದ ಕೊರೊನಾ ವೈರಸ್ ತಡೆಗಟ್ಟುವಿಕೆ ಹಾಗೂ ಹರಡುವಿಕೆ ನಿಯಂತ್ರಣ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜ್ ನೇತೃತ್ವದಲ್ಲಿ ಪರಿಶೀಲನಾ ಸಭೆ ನಡೆಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹರಿಹರದಲ್ಲಿ ಮಹತ್ವದ ಸಭೆ - mla ramppa
ದಾವಣಗೆರೆಯಲ್ಲಿ ಕೊರೊನಾ ಸೋಂಕಿನ ಕುರಿತು ಅಧಿಕಾರಿಗಳ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಸಭೆ ನಡೆಸಿದರು. ತಾಲೂಕಿನಲ್ಲಿ ಇದುವರೆಗೂ ಕೊರೊನಾ ವೈರಸ್ ತಡೆಯಲು ಎಲ್ಲ ಇಲಾಖೆಯ ಅಧಿಕಾರಿಗಳು ಯಾವ ಯಾವ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರಿಗೆ ಮೂಲ ಸೌಲಭ್ಯಗಳು ಲಭಿಸುತ್ತಿವೆಯೇ ಇಲ್ಲವೇ ಹಾಗೂ ಹಳ್ಳಿಗಳಲ್ಲಿ ಯಾವ ಸಮಸ್ಯೆಗಳು ಇವೆ ಎಂಬ ಸಂಪೂರ್ಣ ಮಾಹಿತಿಯನ್ನು ಪಡೆಯಲಾಗಿದೆ.
ತಾಲೂಕಿನಲ್ಲಿ ಇದುವರೆಗೂ ಕೊರೊನಾ ವೈರಸ್ ತಡೆಯಲು ಎಲ್ಲ ಇಲಾಖೆಯ ಅಧಿಕಾರಿಗಳು ಯಾವ ಯಾವ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರಿಗೆ ಮೂಲ ಸೌಲಭ್ಯಗಳು ಲಭಿಸುತ್ತಿವೆಯೇ ಇಲ್ಲವೇ ಹಾಗೂ ಹಳ್ಳಿಗಳಲ್ಲಿ ಯಾವ ಸಮಸ್ಯೆಗಳು ಇವೆ ಎಂಬ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆಯಲಾಯಿತು. ಅಧಿಕಾರಿಗಳು ತಮ್ಮ ಇಲಾಖೆಯಿಂದ ಜನರಿಗೆ ಯಾವ ಸೌಲಭ್ಯಗಳನ್ನು ನೀಡಲಾಗಿದೆ ಮತ್ತು ಅವರ ಇಲಾಖೆಗೆ ಸರ್ಕಾರದಿಂದ ಯಾವ ಅನುದಾನಗಳು ಬೇಕು ಎಂಬ ಬೇಡಿಕೆ ಇಟ್ಟರು.
ಸಭೆಯಲ್ಲಿ ಜಿಲ್ಲಾ ಉಸ್ತವಾರಿ ಸಚಿವ ಬಿ.ಎ.ಬಸವರಾಜ್, ಶಾಸಕ ಎಸ್.ರಾಮಪ್ಪ, ಎಸ್.ವಿ ರಾಮಚಂದ್ರ, ಪ್ರೊ.ಎನ್.ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಿಗಿ, ಎಸ್.ಪಿ ಹನುಮಂತರಾಯ್ಯ, ದೂಡಾ ಅಧ್ಯಕ್ಷ ಶಿವಕುಮಾರ್, ಸಿಇಒ ಪದ್ಮಾ ಬಸವಂತಪ್ಪ, ಜಿ.ಪಂ, ಅಧ್ಯಕ್ಷೆ ಯಶೋಧಾ, ಮಾಜಿ ಶಾಸಕ ಬಿ.ಪಿ ಹರೀಶ್, ಬಿ.ಜೆ.ಪಿ ಜಿಲ್ಲಾ ಅಧ್ಯಕ್ಷ ಎಸ್.ಎಂ ವೀರೇಶ್ ಹಾಗೂ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.