ಕರ್ನಾಟಕ

karnataka

ETV Bharat / state

ಹಬ್ಬಗಳ ಸಂಭ್ರಮದಲ್ಲಿ ಎಚ್ಚರಿಕೆ ವಹಿಸುವುದನ್ನು ಮರೆಯಬೇಡಿ: ಮಹಾಂತೇಶ್ ಬೀಳಗಿ - ವಾಲ್ಮೀಕಿ ಜಯಂತಿ

ದಸರಾ, ದೀಪಾವಳಿ, ಈದ್‍-ಮಿಲಾದ್ ಸೇರಿದಂತೆ ವಿವಿಧ ಹಬ್ಬಗಳ ಆಚರಣೆ ಸಂದರ್ಭದಲ್ಲಿ ವ್ಯಾಪಾರಸ್ಥರು, ಸಾರ್ವಜನಿಕರು ಕೋವಿಡ್ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಂಡು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಈಗಾಗಲೇ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. .

Do not forget to be careful in the festive spirit: Mahantesh R. beelagi
ಹಬ್ಬದ ಸಂಭ್ರಮದಲ್ಲಿ ಎಚ್ಚರಿಕೆ ವಹಿಸುವುದನ್ನು ಮರೆಯಬೇಡಿ: ಮಹಾಂತೇಶ್ ಬೀಳಗಿ

By

Published : Oct 24, 2020, 8:46 PM IST

ದಾವಣಗೆರೆ:ಇದೇ ಅಕ್ಟೋಬರ್​ನಿಂದ ಡಿಸೆಂಬರ್ ತಿಂಗಳವರೆಗೂ ದಸರಾ, ದೀಪಾವಳಿ ಸೇರಿದಂತೆ ವಿವಿಧ ಹಬ್ಬಗಳನ್ನು ಸಂಭ್ರಮದಿಂದ ಆಚರಿಸುವ ಭರದಲ್ಲಿ ಸಾರ್ವಜನಿಕರು ಕೋವಿಡ್ ವೈರಸ್ ಸೋಂಕು ಬಾರದಂತೆ ಎಚ್ಚರಿಕೆ ವಹಿಸುವುದನ್ನು ಮರೆಯಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಮನವಿ ಮಾಡಿದ್ದಾರೆ.

ದಸರಾ, ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಎಚ್ಚರಿಕೆ ವಹಿಸುವುದನ್ನು ಮರೆಯಬೇಡಿ
ದಸರಾ, ದೀಪಾವಳಿ, ಈದ್‍-ಮಿಲಾದ್ ಸೇರಿದಂತೆ ವಿವಿಧ ಹಬ್ಬಗಳ ಆಚರಣೆ ಸಂದರ್ಭದಲ್ಲಿ ವ್ಯಾಪಾರಸ್ಥರು, ಸಾರ್ವಜನಿಕರು ಕೋವಿಡ್ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಂಡು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಈಗಾಗಲೇ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಎಲ್ಲರೂ ಈ ಮಾರ್ಗಸೂಚಿಯನ್ನು ತಪ್ಪದೆ ಪಾಲಿಸಿ, ರೋಗ ಹರಡುವುದನ್ನು ತಡೆಗಟ್ಟಲು ಸಹಕರಿಸಬೇಕು ಎಂದಿದ್ದಾರೆ.

ದಸರಾ ಹಬ್ಬವನ್ನು ಅತ್ಯಂತ ಸರಳವಾಗಿ ಆಚರಿಸಬೇಕು. 100ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ. ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಎಲ್ಲ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದ್ದು, ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯ ಉಂಟಾಗಲು ಹಬ್ಬಗಳು ಪೂರಕವಾಗಬೇಕು. ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.

ಪಟಾಕಿ ಮಾರಾಟದ ಮಳಿಗೆಗಳನ್ನು ನ. 1 ರಿಂದ ನ. 17 ರವರೆಗೆ ಮಾತ್ರ ತೆರೆಯಲು ಅವಕಾಶವಿದೆ. ಪರವಾನಿಗೆದಾರರು ಸಂಬಂಧಪಟ್ಟ ಇಲಾಖೆ ಪ್ರಾಧಿಕಾರದಿಂದ ನೀಡಿರುವ ಪರವಾನಿಗೆಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಯನ್ನು ಇಡಬೇಕು. ಪಟಾಕಿ, ಸಿಡಿಮದ್ದುಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸ್ ಮಾಡಬೇಕು ಎಂದರು.

ಇನ್ನು, ವಾಲ್ಮೀಕಿ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಈ ಬಾರಿ ಚುನಾವಣೆ ನೀತಿ ಸಂಹಿತೆ ಹಾಗೂ ಕೋವಿಡ್ ನಿಯಂತ್ರಣ ಕಾರಣಕ್ಕಾಗಿ ಅ. 31 ರಂದು ಸರಳವಾಗಿ ಆಚರಿಸಲಾಗುವುದು. ಜನರು ಗುಂಪುಗೂಡದೇ ಆದಷ್ಟು ಸರ್ಕಾರದ ಮಾರ್ಗಸೂಚಿ ಹಾಗೂ ನೀತಿ ಸಂಹಿತೆಯನ್ನು ಪಾಲಿಸಿ ಎಂದರು.

ಜಿ.ಪಂ.ಸದಸ್ಯ ಕೆ.ಹೆಚ್. ಓಬಳಪ್ಪ ಮಾತನಾಡಿ, ಕಳೆದ ಬಾರಿ ವಾಲ್ಮೀಕಿ ಜಯಂತಿಯನ್ನು ಪಾದಯಾತ್ರೆ ಕೈಗೊಂಡು ಅದ್ದೂರಿಯಾಗಿ ಆಚರಿಸಲಾಗಿತ್ತು. ಆದರೆ, ಈ ಬಾರಿ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ಕೋವಿಡ್ ವೈರಸ್ ಹರಡುವುದನ್ನು ತಪ್ಪಿಸುವ ಸಲುವಾಗಿ ಸರಳವಾಗಿ ಆಚರಿಸುವುದು ಸೂಕ್ತ ಎಂದು ಸಲಹೆ ನೀಡಿದರು.

ABOUT THE AUTHOR

...view details