ದಾವಣಗೆರೆ:ಕುಡಿದ ಮತ್ತಿನಲ್ಲಿಬೈಕ್ ಓಡಿಸಿದ ವೈದ್ಯಕೀಯ ವಿದ್ಯಾರ್ಥಿ ಪಾದಚಾರಿಗೆ ಡಿಕ್ಕಿ ಹೊಡೆದು ಅನಾಹುತ ಸೃಷ್ಟಿಸಿದ ಘಟನೆ ನಗರದಲ್ಲಿ ನಡೆದಿದೆ.
ಕುಡಿದ ಅಮಲಲ್ಲಿ ಪಾದಚಾರಿಗೆ ವೈದ್ಯಕೀಯ ವಿದ್ಯಾರ್ಥಿಯ ಬೈಕ್ ಡಿಕ್ಕಿ
ಕುಡಿದು ಬೈಕ್ ಚಲಾಯಿಸಿದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಪಾದಚಾರಿಗೆ ಡಿಕ್ಕಿ ಹೊಡೆದು ಸಾರ್ವಜನಿಕರ ಜೊತೆ ಅಸಭ್ಯ ವರ್ತನೆ ತೋರಿದ್ದಾನೆ.
ಬೈಕ್ ಡಿಕ್ಕಿ
ಬಿಇಐಟಿ ಕಾಲೇಜ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಪಾದಚಾರಿ ಗಾಯಗೊಂಡಿದ್ದಾನೆ. ಮೆಡಿಕಲ್ ವಿದ್ಯಾರ್ಥಿ ಮದ್ಯ ಸೇವಿಸಿ ಬೈಕ್ ಚಲಾಯಿಸಿಕೊಂಡು ಬಂದು ಅಪಘಾತ ಮಾಡಿದ್ದಾನೆ ಎಂಬ ಮಾಹಿತಿ ದೊರೆತಿದೆ. ಈ ವೇಳೆ ಆತ ಸ್ಥಳೀಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳ ಹೇಳಿದ್ದಾರೆ. ಬಳಿಕ ಸ್ಥಳೀಯರೇ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಅಪಘಾತ ಎಸಗಿದಾತ ಬಾಪೂಜಿ ಆಸ್ಪತ್ರೆಯಲ್ಲಿ ಸಹಾಯಕ ವೈದ್ಯನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.