ಶಿವಮೊಗ್ಗ/ದಾವಣಗೆರೆ:ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರ ನೆರವಿಗಾಗಿ ಶಿವಮೊಗ್ಗದ ಸಂಸದ ರಾಘವೇಂದ್ರ ದೇಣಿಗೆ ಸಂಗ್ರಹಕ್ಕೆ ಶಿವಮೊಗ್ಗದಲ್ಲಿ ಚಾಲನೆ ನೀಡಿದ್ದು, ದಾವಣಗೆರೆಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ನಿಧಿ ಸಂಗ್ರಹಣೆ ಕಾರ್ಯಕ್ರಮ ನಡೆಯಿತು.
ಪ್ರವಾಹ ಸಂತ್ರಸ್ತರ ನೆರವಿಗಾಗಿ ಬಿಜೆಪಿಯಿಂದ ದೇಣಿಗೆ ಸಂಗ್ರಹ - ನಿಧಿ ಸಂಗ್ರಹ
ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಜನ ಸಂಕಷ್ಟದಲ್ಲಿ ಸಿಲುಕಿದ್ದು, ಅಂತವರ ರಕ್ಷಣೆಗಾಗಿ ಹಾಗೂ ಸದ್ಯ ಅವರ ದಿನನಿತ್ಯದ ಆಹಾರೋತ್ಪನ್ನಗಳನ್ನು ಪೂರೈಸಲೆಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ದಾವಣಗೆರೆ ಹಾಗೂ ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮತ್ತಿತರ ಗಣ್ಯರು ದೇಣಿಗೆ ಸಂಗ್ರಹಿಸಿದರು.
ದಾವಣಗೆರೆಯ ಚಾಮರಾಜಪೇಟೆಯಲ್ಲಿ ಡಬ್ಬಿ ಹಿಡಿದ ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕ ಎಸ್.ಎ.ರವೀಂದ್ರನಾಥ್ ನಿಧಿ ಸಂಗ್ರಹಕ್ಕೆ ಚಾಲನೆ ನೀಡಿದರು. ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ, ನಗರದ ಪೊಲೀಸ್ ಚೌಕಿಯಿಂದ ದೇಣಿಗೆ ಸಂಗ್ರಹ ಕಾರ್ಯಕ್ರಮ ಪ್ರಾರಂಭಿಸಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಮಾಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಾನಿ ಉಂಟಾಗಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಹಾಗಾಗಿ ಇಂತಹ ಸಂದರ್ಭದಲ್ಲಿ ನಮ್ಮನ್ನೆಲ್ಲಾ ಬೆಳೆಸಿದ, ನಮ್ಮನ್ನ ಮನುಷ್ಯರನ್ನಾಗಿ ಮಾಡಿದಂತಹ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೇತೃತ್ವದಲ್ಲಿ ನಿಧಿ ಸಂಗ್ರಹ ಮಾಡುತ್ತಿದ್ದೇವೆ ಎಂದರು.