ಕರ್ನಾಟಕ

karnataka

ETV Bharat / state

ಕೊರೊನಾ ತೊಲಗಿ ಉತ್ತಮ ಮಳೆ ಬರಲೆಂದು ಕರಿಗಲ್ಲು ಪೂಜೆ - ದಾವಣಗೆರೆ ಜಿಲ್ಲಾ ಬಿತ್ತನೆ ಬೀಜ,ರಸಗೊಬ್ಬರ ಹಾಗೂ ಕೀಟನಾಶಕ ಮಾರಾಟಗಾರ ಸಂಘ

ಕೊರೊನಾ ತೊಲಗಲಿ ಎಂದು ದಾವಣಗೆರೆ ನಗರ ದೇವತೆ ದುರ್ಗಾಂಬಿಕಾ ದೇವಿ ಸನ್ನಿಧಿಯಲ್ಲಿ ಕರಿಗಲ್ಲು ಪೂಜೆ ನೆರವೇರಿಸಿ ಪ್ರಾರ್ಥನೆ ಸಲ್ಲಿಸಲಾಯಿತು.

fdf
ಕೊರೊನಾ ತೊಲಗಿ ಮಳೆ ಬರಲೆಂದು ಕರಿಗಲ್ಲು ಪೂಜೆ

By

Published : Jun 16, 2020, 7:17 PM IST

ದಾವಣಗೆರೆ: ಕೊರೊನಾ ಮಹಾಮಾರಿ ತೊಲಗಲಿ ಹಾಗೂ ಉತ್ತಮ ಮಳೆಯಾಗಲಿ ಎಂದು ಪ್ರಾರ್ಥಿಸಿ ನಗರದ ದುರ್ಗಾಂಬಿಕಾ ದೇವಿ ಸನ್ನಿಧಿಯಲ್ಲಿ ಕರಿಗಲ್ಲು ಪೂಜೆ ನೆರವೇರಿಸಲಾಯಿತು.

ಜಿಲ್ಲಾ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮಾರಾಟಗಾರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಪೂಜೆಯಲ್ಲಿ 101 ಕೊಡ ನೀರಿನಿಂದ ಕರಿಗಲ್ಲಿಗೆ ಜಲಾಭಿಷೇಕ, ವಿಶೇಷ ಪೂಜೆ ನೆರವೇರಿಸಲಾಯಿತು. ಸಮೃದ್ಧವಾಗಿ ಮಳೆ ಬಂದು ರೈತರು, ವ್ಯಾಪಾರಸ್ಥರು ಸೇರಿದಂತೆ ಎಲ್ಲಾ ವರ್ಗದ ಜನರಿಗೆ ಒಳ್ಳೆಯದಾಗಲಿ ಎಂದು ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.

ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ನಾಗರಾಜ ಲೋಕಿಕೆರೆ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್, ಸಹಾಯಕ ಕೃಷಿ ನಿರ್ದೇಶಕ ರೇವಣಸಿದ್ಧನ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ABOUT THE AUTHOR

...view details