ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾಕ್ಕೆ ಎಂಟು ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. 197 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು, ಸೋಂಕಿತರ ಸಂಖ್ಯೆ 3,040ಕ್ಕೆ ಏರಿಕೆಯಾಗಿದೆ.
ದಾವಣಗೆರೆಯ ಏಳು ಮಂದಿ ಹಾಗೂ ಹರಿಹರದ ಒಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಏಳು ಮಂದಿ ವೃದ್ಧರು ಹಾಗೂ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಏಳು ಮಂದಿ ಸಿ. ಜೆ. ಆಸ್ಪತ್ರೆಯಲ್ಲಿ ಮರಣಿಸಿದರೆ, ಒಬ್ಬರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.