ದಾವಣಗೆರೆ :ಜಿಲ್ಲೆಯ ನ್ಯಾಮತಿ ತಾಲೂಕಿನ ಜೀನಹಳ್ಳಿಯ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ನಿರ್ಧಾರದಿಂದ ಹಿಂದೆ ಸರಿಯೋದಿಲ್ಲ ಅಂತಾ ಜಿಲ್ಲಾಡಳಿತಕ್ಕೆ ಸ್ಪಷ್ಟಪಡಿಸಿದ್ದಾರೆ. ಬಸವೇಶ್ವರ ದೇವಸ್ಥಾನದಲ್ಲಿ ಜಿಲ್ಲಾಧಿಕಾರಿ ನೇತೃತ್ವದ ತಂಡ ಗ್ರಾಮಸ್ಥರನ್ನ ಮನವೊಲಿಸುವ ಯತ್ನವೂ ವಿಫಲವಾಗಿದೆ.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಸ್ಪಿ ಹನುಮಂತರಾಯ ನೇತೃತ್ವದ ತಂಡ ಮನವೊಲಿಕೆ ಮಾಡಲು ಪ್ರಯತ್ನಿಸಿದ್ರೂ ಕೂಡ ಆ ಯತ್ನ ವಿಫಲ ಆಗಿದೆ. ಜೀನಹಳ್ಳಿಗೆ ಗ್ರಾಮ ಪಂಚಾಯತ್ ಮಾನ್ಯತೆ ನೀಡಲು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆ ಗ್ರಾಪಂ ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರು ಮುಂದಾಗಿದ್ದಾರೆ.