ದಾವಣಗೆರೆ :ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬಣವೆಗೆ ಬೆಂಕಿ ತಗುಲಿ ಸುಟ್ಟು ಕರಕಲಾಗಿರುವ ಘಟನೆ ನಗರದ ಹೊರ ವಲಯದಲ್ಲಿನ ಕುಂದುವಾಡದಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲಾದ ಬಣವೆ - ದಾವಣಗೆರೆ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬಣವೆಗೆ ಬೆಂಕಿ ತಗುಲಿ ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆ ಹೊರ ವಲಯದಲ್ಲಿನ ಕುಂದುವಾಡದಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲಾದ ಬಣವೆ
ಹೊಸ ಕುಂದುವಾಡ ಗ್ರಾಮದ ಗಂಗಾಧರ ಎಂಬುವರಿಗೆ ಸೇರಿದ ಹುಲ್ಲಿನ ಬಣವೆ ಇದಾಗಿದ್ದು, ದನ, ಕರುಗಳಿಗೆ ಸಂಗ್ರಹಿಸಿಟ್ಟಿದ್ದ ಭತ್ತದ ಹುಲ್ಲಿಗೆ ವಿದ್ಯುತ್ ಬೆಂಕಿ ತಗುಲಿದ ಪರಿಣಾಮ ಕ್ಷಣಾರ್ಧದಲ್ಲಿ ಲಕ್ಷಾಂತರ ಮೌಲ್ಯದ ಮೇವು ಸುಟ್ಟು ಭಸ್ಮವಾಗಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದರು. ಘಟನೆ ಸಂಬಂಧ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.