ದಾವಣಗೆರೆ: ಬಿಜೆಪಿಯವರಿಗೆ ಉದ್ಯೋಗ ಇಲ್ಲ, ಅವರು ನಿರುದ್ಯೋಗಿಗಳಾಗಿದ್ದಾರೆ. ಹೀಗಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ವಾಗ್ದಾಳಿ ನಡೆಸಿದರು. ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಜಾತಿ- ಜಾತಿಗಳ ನಡುವೆ ಧರ್ಮ- ಧರ್ಮದ ನಡುವೆ ದ್ವೇಷ ಹುಟ್ಟಿಸುವ ಕೆಲಸ ಮಾಡಿದರು. ಸಮಾಜ ಒಡೆಯುವ ಕೆಲಸ ಮಾಡಿದ್ರು. ಜನರ ಭಾವನಾತ್ಮಕ ವಿಷಯಗಳನ್ನು ಕೆರಳಿಸುವ ಕೆಲಸ ಮಾಡಿ, ಜಗಳ ಹಚ್ಚಿದರು. ಅದನ್ನು ನಾವು ತಡೆಗಟ್ಟುವ ಕೆಲಸ ಮಾಡಿದ್ದೇವೆ ಎನ್ನುತ್ತಾ ಮತಾಂತರ ನಿಷೇಧ ಕಾಯ್ದೆ ರದ್ದತಿ ನಿರ್ಧಾರವನ್ನು ಖಂಡ್ರೆ ಸಮರ್ಥಿಸಿಕೊಂಡರು.
ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಬಗ್ಗೆ ಪ್ರತಿಕ್ರಿಯಿಸಿ, ವಿದ್ಯುತ್ ದರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವರೇ ಏರಿಕೆ ಮಾಡಿದ್ದಾರೆ. ಆಗಸ್ಟ್‌ನಿಂದ 95% ಹೆಚ್ಚು ಗ್ರಾಹಕರಿದ್ದಾರೆ. 200 ಯೂನಿಟ್ ಒಳಗೆ ಉಪಯೋಗ ಮಾಡುವವರೆಗೆ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದರು.
ಗ್ಯಾರಂಟಿಗಳ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಗ್ಯಾರಂಟಿ ಯೋಜನೆಗಳಿಗೆ ಕಂಡಿಷನ್ ಹಾಕಿದ್ದೇವೆ. ಆದರೆ ಅವು ರಾಜ್ಯದವರಿಗೆ ಸೌಲಭ್ಯ ಸಿಗಬೇಕು ಎಂಬ ಉದ್ದೇಶ ಹೊಂದಿದೆ. ಕೆಲವು ಗ್ಯಾರಂಟಿಗಳಿಗೆ ಮಾತ್ರ ಕಂಡಿಷನ್ ಅನ್ವಯ. ಇದರಿಂದ 90% ಜನರಿಗೆ ಲಾಭವಾಗುತ್ತದೆ ಎಂದು ಹೇಳಿದರು.