ದಾವಣಗೆರೆ: ಔಷಧ ಉಗ್ರಾಣದಲ್ಲಿ ಅವಧಿ ಮೀರಿದ ಔಷಧಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡದೇ ದಾಸ್ತಾನು ಇಟ್ಟಿದ್ದಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆ ಜಿಲ್ಲಾಸ್ಪತ್ರೆ ಉಗ್ರಾಣದಲ್ಲಿ ಅವಧಿ ಮೀರಿದ ಔಷಧ ದಾಸ್ತಾನು : ಡಿಸಿ ಗರಂ - ದಾವಣಗೆರೆ ಉಗ್ರಾಣದಲ್ಲಿ ಅವಧಿ ಮೀರಿದ ಔಷಧ
ದಾವಣಗೆರೆ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಔಷಧ ಉಗ್ರಾಣದ ಅವ್ಯವಸ್ಥೆ ಕಂಡು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಗರಂ ಆಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
![ದಾವಣಗೆರೆ ಜಿಲ್ಲಾಸ್ಪತ್ರೆ ಉಗ್ರಾಣದಲ್ಲಿ ಅವಧಿ ಮೀರಿದ ಔಷಧ ದಾಸ್ತಾನು : ಡಿಸಿ ಗರಂ](https://etvbharatimages.akamaized.net/etvbharat/prod-images/768-512-4442384-thumbnail-3x2-vish.jpg)
ದಾವಣಗೆರೆ ಡಿಸಿ ಗರಂ
ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಉಗ್ರಾಣಕ್ಕೆ ಭೇಟಿ ನೀಡಿದಾಗ ಅವ್ಯವಸ್ಥೆ ಕಂಡು ಡಿಸಿ ಗರಂ ಆದರು. ಔಷಧ ಉಗ್ರಾಣದ ಪ್ರಭಾರ ವಹಿಸಿಕೊಂಡಿರುವ ಕೊಟ್ರೇಶ್ ಬಣಕಾರ್ಗೆ ಸಂಬಂಧಪಟ್ಟ ಸಂಸ್ಥೆಯಿಂದ ಅವಧಿ ಮೀರಿದ ಔಷಧಿಗಳನ್ನು ನಿಯಾಮಾನುಸಾರ ವಿಲೇವಾರಿ ಮಾಡುವಂತೆ ಸೂಚಿಸಿದರು.
ಇನ್ನು ಮುಂದೆ ಈ ರೀತಿಯ ಲೋಪಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವುದಾಗಿ ಡಿಸಿ ಎಚ್ಚರಿಕೆ ನೀಡಿದ್ದಾರೆ.