ದಾವಣಗೆರೆ:ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ತಡ ರಾಜ್ಯದಲ್ಲಿ ಸಚಿವ ಸ್ಥಾನಕ್ಕೆ ಪೈಪೋಟಿ ಹೆಚ್ಚಾಗಿದೆ. ಅದರಲ್ಲೂ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಸಚಿವ ಸ್ಥಾನ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಅಭಿಯಾನವನ್ನೇ ಶುರು ಮಾಡಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳಿಂದ ಅಭಿಯಾನ
ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕರಾಗಿ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಅಭಿಯಾನ ಆರಂಭಿಸಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪ
ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕರಾಗಿ ಮಾಡಾಳ್ ವಿರೂಪಾಕ್ಷಪ್ಪ ಮೂರು ಬಾರಿ ಆಯ್ಕೆಯಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮ ವಹಿಸಿದ್ದಾರೆ. ಅಲ್ಲದೇ ಲಿಂಗಾಯತ ಸಮಾಜದ ಮುಖಂಡರಾಗಿದ್ದಾರೆ.
ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ್ರೆ ಜಿಲ್ಲೆ ಹಾಗೂ ಕ್ಷೇತ್ರದ ಅಭಿವೃದ್ಧಿಯಾಗುತ್ತದೆ. ಅದ್ದರಿಂದ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಶಾಸಕರ ಅಭಿಮಾನಿಗಳು ಒತ್ತಾಯಿಸಿದ್ದಾರೆ.