ದಾವಣಗೆರೆ: ವಿದ್ಯುತ್ ತಂತಿ ತಗುಲಿ ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚೀಲೂರು ಗ್ರಾಮದಲ್ಲಿ ನಡೆದಿದೆ.
ವಿದ್ಯುತ್ ತಂತಿ ತಗುಲಿ ರೈತ ಸಾವು - Farmer died in Nyamati Taluq
ವಿದ್ಯುತ್ ತಂತಿ ತಗುಲಿ ರೈತ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚೀಲೂರು ಗ್ರಾಮದಲ್ಲಿ ನಡೆದಿದೆ.
ವಿದ್ಯುತ್ ತಂತಿ ತಗುಲಿ ರೈತ ಸಾವು
ಸುರೇಶ (52) ಸಾವನ್ನಪ್ಪಿದ ರೈತ. ತನ್ನ ಜಮೀನಿಗೆ ನೀರು ಬಿಡಲು ಪಂಪ್ ಸೆಟ್ ಆನ್ ಮಾಡಲು ತೆರಳಿದ್ದ ವೇಳೆ, ವಿದ್ಯುತ್ ಚಾಲಿತ ಪಂಪ್ ಸೆಟ್ ತಂತಿ ತುಳಿದು ರೈತ ಸಾವನ್ನಪ್ಪಿದ್ದಾನೆ. ರೈತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನಾ ಸ್ಥಳಕ್ಕೆ ನ್ಯಾಮತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.