ದಾವಣಗೆರೆ: ಶೇಂಗಾ ಬೆಳೆಗೆ ವೈಜ್ಞಾನಿಕ ದರ ನಿಗದಿಪಡಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಜಗಳೂರು ಪಟ್ಟಣದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಶೇಂಗಾ ಬೆಳೆಗೆ ವೈಜ್ಞಾನಿಕ ದರ ನಿಗದಿಪಡಿಸುವಂತೆ ಆಗ್ರಹಿಸಿ ರೈತರ ಪ್ರತಿಭಟನೆ.. - ಜಗಳೂರಿನಲ್ಲಿ ರೈತರು ಪ್ರತಿಭಟನೆ
ಶೇಂಗಾ ಬೆಳೆಗೆ ವೈಜ್ಞಾನಿಕ ದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಗಳೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು.
ರೈತರ ಪ್ರತಿಭಟನೆ
ಶೇಂಗಾ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು ಹಾಗೂ ಕೂಡಲೇ ಜಗಳೂರಿನಲ್ಲಿ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ಜಗಳೂರು ಪಟ್ಟಣದಲ್ಲಿ ರ್ಯಾಲಿ ನಡೆಸುವ ಮೂಲಕ ರೈತರು ಪ್ರತಿಭಟನೆ ನಡೆಸಿದರು.
ರ್ಯಾಲಿ ಮೂಲಕ ತಾಲೂಕು ಕಚೇರಿಗೆ ಆಗಮಿಸಿದ ರೈತರು, ಉಪ ತಹಶಿಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ರೈತ ಸಂಘದ ಮುಖಂಡರು, ರೈತರು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಅನ್ನದಾತರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದರು.