ಕರ್ನಾಟಕ

karnataka

ETV Bharat / state

ಅತೃಪ್ತ ಶಾಸಕರ ವಿರುದ್ಧ ದಾವಣಗೆರೆಯಲ್ಲಿ ಛೀ ಥೂ ಚಳುವಳಿ - undefined

ಅತೃಪ್ತ ಶಾಸಕರ ನಡೆಯಿಂದಾಗಿ ರಾಜ್ಯದ ಅಭಿವೃದ್ಧಿ ಕುಂಠಿತಗೊಳ್ಳುತ್ತಿದ್ದು, ಇಂತಹ ನಾಯಕರಿಗೆ ಮತ್ತೆ ಚುನಾವಣೆಯಲ್ಲಿ ಭಾಗವಹಿಸಲು ಅವಕಾಶ ನೀಡಬಾರದೆಂದು ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ರೈತ ಸಂಘದಿಂದ  ಛೀ ಥೂ ಚಳುವಳಿ

By

Published : Jul 15, 2019, 6:22 PM IST

ದಾವಣಗೆರೆ:ಕರ್ನಾಟಕ ರಾಜಕೀಯ ಪರಿಸ್ಥಿತಿ ಡೋಲಾಯಮಾನವಾಗಿದೆ. ಇತ್ತ ಶಾಸಕರು ರೆಸಾರ್ಟ್ ಕಡೆ ಮುಖ ಮಾಡಿದ್ದು, ಕ್ಷೇತ್ರಗಳ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಅತೃಪ್ತ ಶಾಸಕರ ಭಾವಚಿತ್ರಗಳಿಗೆ ಎಲೆ ಅಡಿಕೆ ಹಾಕಿಕೊಂಡು ಛೀ ಥೂ ಎಂದು ಉಗಿಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿವೆ.

ರೈತ ಸಂಘದಿಂದ ಛೀ ಥೂ ಚಳುವಳಿ

ಹೌದು, ದಾವಣಗೆರೆ ನಗರದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಿದ ಸಂಘಟನೆ ಸದಸ್ಯರು, ಅತೃಪ್ತ ಶಾಸಕರ ಭಾವಚಿತ್ರಗಳಿಗೆ ಛೀ ಥೂ ಎಂದು ಉಗಿದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಯಾವುದೇ ಶಿಸ್ತು ಬದ್ಧತೆಯಿಲ್ಲದೆ ವಿಧಾನಸಭೆಯಲ್ಲಿ ಗಲಭೆ ಎಬ್ಬಿಸುತ್ತಿವೆ. ಮತದಾರರ ಆಶಯಗಳನ್ನು ಗಾಳಿಗೆ ತೂರಿ ಆಸೆ ಆಮಿಷಗಳಿಗೆ ಒಳಗಾಗಿ ರಾಜ್ಯ ಅಭಿವೃದ್ಧಿ ನಿರ್ಲಕ್ಷಿಸಿದ್ದಾರೆ. ಹಾಗಾಗಿ ಈ ಸರ್ಕಾರವನ್ನು ವಿಸರ್ಜನೆಗೊಳಿಸಿ ಮತ್ತೆ ಚುನಾವಣೆ ನಡೆಸಬೇಕೆಂದು ಒತ್ತಾಯಿಸಿದರು.

For All Latest Updates

TAGGED:

ABOUT THE AUTHOR

...view details