ದಾವಣಗೆರೆ: ಶತಾಯುಷಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಬಗ್ಗೆ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ದೊರೆಸ್ವಾಮಿ ಬಗ್ಗೆ ಯತ್ನಾಳ್ ಹೇಳಿಕೆ ಖಂಡಿಸಿ ದಾವಣಗೆರೆಯಲ್ಲಿ ರೈತರ ಪ್ರತಿಭಟನೆ - ರೈತರ ಪ್ರತಿಭಟನೆ
ಶತಾಯುಷಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಬಗ್ಗೆ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ರೈತರು, ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕೃತಿ ದಹಿಸಿದರಲ್ಲದೆ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರ. ಪಾಕ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಯತ್ನಾಳ್ ಶತಾಯುಷಿ ಅವರಿಗೆ ಅಪಮಾನ ಮಾಡಿದ್ದಾರೆ. ಮಾತ್ರವಲ್ಲ ಈ ಹೇಳಿಕೆಗೆ ಬದ್ಧ ಎನ್ನುವ ಮೂಲಕ ಉದ್ಧಟತನ ಪ್ರದರ್ಶಿಸಿದ್ದಾರೆ. ಇಂಥವರು ಶಾಸಕರಾಗಲು ನಾಲಾಯಕ್. ಕೂಡಲೇ ಸಿಎಂ ಯಡಿಯೂರಪ್ಪ ಅವರು ಇವರನ್ನು ಶಾಸಕತ್ವ ಸ್ಥಾನದಿಂದ ಅನರ್ಹಗೊಳಿಸಲು ಕ್ರಮ ಕೈಗೊಳ್ಳಬೇಕು. ಇಂಥವರು ವಿಧಾನಸೌಧದ ಮೆಟ್ಟಿಲು ಹತ್ತುವ ಯೋಗ್ಯತೆ ಇಲ್ಲದವರು. ಕೂಡಲೇ ಯತ್ನಾಳ್ ಕ್ಷಮೆಯಾಚಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.