ದಾವಣಗೆರೆ:ಸಾಲಬಾಧೆ ತಾಳಲಾರದೆ ರೈತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊನ್ನಾಳಿ ತಾಲೂಕಿನ ಗೋವಿನಕೋವಿ ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ರೈತ ಮಹಿಳೆ ಆತ್ಮಹತ್ಯೆ - Davanagere latest news
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಗೋವಿನಕೋವಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Suicide
24 ವರ್ಷದ ಶ್ವೇತಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಶ್ವೇತಾ ಅವರ ಪತಿ ಮಹೇಶ್ವರಪ್ಪ ವಿವಿಧ ಬ್ಯಾಂಕ್ ಹಾಗೂ ಕೈಗಡವಾಗಿ ಸುಮಾರು 5 ಲಕ್ಷ ರೂ.ಗೂ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗಿದೆ. ಅದನ್ನು ವಾಪಸ್ ನೀಡುವುದು ಹೇಗೆ ಎಂಬ ಚಿಂತೆಯಲ್ಲಿದ್ದ ಶ್ವೇತಾ, ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೊನ್ನಾಳಿ ಸಿಪಿಐ ಟಿ.ವಿ.ದೇವರಾಜ್, ನ್ಯಾಮತಿ ತಹಶೀಲ್ದಾರ್ ತನುಜಾ ಟಿ. ಸವದತ್ತಿ, ಸಬ್ ಇನ್ಸ್ಪೆಕ್ಟರ್ ಹನುಮಂತಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.