ದಾವಣಗೆರೆ:ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗೋಪೆನಹಳ್ಳಿ ಗ್ರಾಮದಲ್ಲಿ ನಡೆದಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ... ಕೊಲೆ ಶಂಕೆ - ಪತ್ನಿ ಕೊಲೆ ಶಂಕೆ
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗೋಪೆನಹಳ್ಳಿ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಇದು ಕೊಲೆ ಎಂದು ಮೃತರ ಸಂಬಂಧಿಕರು ಶಂಕಿಸಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ದೇಹ ಪತ್ತೆ
ಪವಿತ್ರಾ (28) ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ಪವಿತ್ರ ಮತ್ತು ಹರೀಶ್ ದಂಪತಿಗೆ ಮೂರು ಮಕ್ಕಳಿದ್ದಾರೆ. ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪವಿತ್ರಾ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗುತ್ತಿದೆ.
ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪವಿತ್ರಾ ಶವವಿದ್ದು, ಮಹಿಳೆಯ ಪತಿ ಹರೀಶ್ ಮೇಲೆ ಸಂಬಂಧಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಸ್ಥಳಕ್ಕೆ ನ್ಯಾಮತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.