ದಾವಣಗೆರೆ: ಯುವಕನ ಶವವೊಂದು ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚನ್ನಗಿರಿ ತಾಲೂಕಿನ ಕಾಕನೂರು ಗ್ರಾಮದಲ್ಲಿ ನಡೆದಿದೆ.
ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ - ಶವವೊಂದು ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಪತ್ತೆ
ದಾವಣಗೆರೆಯ ಗ್ರಾಮವೊಂದರಲ್ಲಿ ಯುವಕನ ಶವವೊಂದು ಕೈಕಾಲು ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
![ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ ಕೊಲೆ ಶಂಕೆ](https://etvbharatimages.akamaized.net/etvbharat/prod-images/768-512-6127899-thumbnail-3x2-fgjghk.jpg)
ಕೊಲೆ ಶಂಕೆ
ಭೈರೇಶ್ ಮೃತ ಯುವಕ. ಗ್ರಾಮದ ಅಡಿಕೆ ತೋಟದ ಕೃಷಿ ಹೊಂಡದಲ್ಲಿ ಯುವಕನ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಬಿಸಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಭೈರೇಶ್ನ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸಂತೇಬೆನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.