ದಾವಣಗೆರೆ:ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ಕೊರೊನಾ ನಿಯಮ ಉಲ್ಲಂಘಿಸಿದ ಆರೋಪದ ಮೇರೆಗೆ ಕಾಂಗ್ರೆಸ್ ಶಾಸಕ ರಾಮಪ್ಪ ಹಾಗೂ ಪುತ್ರ ಯತಿರಾಜ್ ಅವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಇದೇ ತಿಂಗಳ 2 ರಂದು ಹರಿಹರದ ಸಿದ್ದೇಶ್ವರ ಪ್ಯಾಲೇಸ್ನಲ್ಲಿ ಶಾಸಕ ಎಸ್.ರಾಮಪ್ಪ ಅವರ ಪುತ್ರಿಯ ವಿವಾಹ ಜರುಗಿತ್ತು. ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಬರುತ್ತಿದ್ದಂತೆ ಜನಜಂಗುಳಿಯಾಗಿ ಕೊರೊನಾ ನಿಯಮ ಉಲ್ಲಂಘನೆಯಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರು ತಹಶೀಲ್ದಾರ್, ಸಿಪಿಐ, ನಗರಸಭೆ ಆಯುಕ್ತರಿಗೆ ಡಿಸಿಯಿಂದ ನೋಟೀಸ್ ನೀಡಿ ಮಾಹಿತಿ ಕೇಳಿದ್ದರು.