ಕರ್ನಾಟಕ

karnataka

ETV Bharat / state

ಅಪಘಾತದಲ್ಲಿ ಲಾರಿಯೊಳಗೆ ಸಿಲುಕಿದ ಚಾಲಕ, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ - Kannada news

ಆನಗೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿತ್ತು. ಈ ವೇಳೆ ಚಾಲಕ ನಜ್ಜುಗುಜ್ಜಾದ ಲಾರಿಯೊಳಗೆ ಸಿಲುಕು ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದ.

ಅಗ್ನಿ ಶಾಮಕ ದಳದ ಸಿಬ್ಬಂದಿಗಳ ಯಶಸ್ವಿಕಾರ್ಯಾಚರಣೆ

By

Published : Jun 6, 2019, 7:55 PM IST

ದಾವಣಗೆರೆ :ಅಪಘಾತದ ವೇಳೆ ಲಾರಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಚಾಲಕನನ್ನು ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಅಗ್ನಿ ಶಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ. ಈ ಘಟನೆ ಆನಗೋಡು ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಯಶಸ್ವಿ ಕಾರ್ಯಾಚರಣೆ

ಕಳೆದ ರಾತ್ರಿ 10:45ರ ಸುಮಾರಿಗೆ ಆನಗೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಹಿಂದಿದ್ದ ಲಾರಿಯ ಮುಂಭಾಗ ನಜ್ಜುಗುಜ್ಜಾಗಿ ಚಾಲಕ ಗಾಯಗೊಂಡು ಸಿಕ್ಕಿಹಾಕಿಕೊಂಡಿದ್ದ. ಘಟನೆ ಬಗ್ಗೆ ಮಾಹಿತಿ ಪಡೆದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಲಾರಿಯೊಳಗೆ ಸಿಕ್ಕಿಹಾಕಿಕೊಂಡು ಒದ್ದಾಡುತ್ತಿದ್ದ ಚಾಲಕನ್ನು ರಕ್ಷಿಸಲು ಮುಂದಾಗಿದ್ದಾರೆ. ಸುಮಾರು 7 ಗಂಟೆಗೂ ಹೆಚ್ಚು ಹೊತ್ತು ಕಾರ್ಯಾಚರಣೆ ನಡೆಸಿದ ರಕ್ಷಣಾ ಸಿಬ್ಬಂದಿ ಚಾಲಕನನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಲಾರಿಯೊಳಗೆ ರಾಸಾಯನಿಕ ತೈಲ ಚೆಲ್ಲಿದ್ದ ಕಾರಣ ರಕ್ಷಣಾ ಕಾರ್ಯಕ್ಕೆ ಅಡ್ಡಿ ಉಂಟಾಗಿತ್ತು ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.

ಗಾಯಗೊಂಡಿದ್ದ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details