ದಾವಣಗೆರೆಯಲ್ಲಿ ಕೊರೊನಾಗೆ ಮೊದಲ ಬಲಿ:ರಾಜ್ಯದಲ್ಲಿ ಸಾವಿನ ಸಂಖ್ಯೆ 23ಕ್ಕೆ ಏರಿಕೆ - First death for corona in Davanagere
![ದಾವಣಗೆರೆಯಲ್ಲಿ ಕೊರೊನಾಗೆ ಮೊದಲ ಬಲಿ:ರಾಜ್ಯದಲ್ಲಿ ಸಾವಿನ ಸಂಖ್ಯೆ 23ಕ್ಕೆ ಏರಿಕೆ ದಾವಣಗೆರೆಯಲ್ಲಿ ಕೊರೊನಾಗೆ ಮೊದಲ ಬಲಿ](https://etvbharatimages.akamaized.net/etvbharat/prod-images/768-512-7022936-755-7022936-1588351508138.jpg)
22:05 May 01
ದಾವಣಗೆರೆಯಲ್ಲಿ ಕೋವಿಡ್ನಿಂದ ವೃದ್ಧ ಸಾವು
ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿಯಾಗಿದ್ದು, ಜಾಲಿನಗರದ ನಿವಾಸಿ 69 ವರ್ಷದ ವೃದ್ಧ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಮಾಹಿತಿ ನೀಡಿದ್ದಾರೆ.
ಕಳೆದ ಮೂರು ದಿನಗಳ ಹಿಂದೆ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿದ್ದ ವೃದ್ದನನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಶಿವಮೊಗ್ಗಕ್ಕೆ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಪುಣೆ ಲ್ಯಾಬ್ ನಿಂದಲೂ ವರದಿ ಪಾಸಿಟಿವ್ ಬಂದಿತ್ತು. ನಿನ್ನೆ ಇವರ ಮಾದರಿ ಪರೀಕ್ಷಾ ವರದಿ ಕೊರೊನಾ ಪಾಸಿಟಿವ್ ಎಂಬುದು ದೃಢ ಪಟ್ಟಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ಇಂದು ಅಸುನೀಗಿದ್ದಾರೆ. ಹೃದಯ ಸಂಬಂಧಿ ಖಾಯಿಲೆ, ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಮಾಹಿತಿ ನೀಡಿದರು.
ವೃದ್ಧನಿಂದ ಆತನ ಮೂವರು ಸೊಸೆಯರು, ಪುತ್ರ, ಮೊಮ್ಮಗನಿಗೆ ಸೋಂಕು ತಗುಲಿರುವುದು ಇಂದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ತಿಳಿಸಿದರು.