ದಾವಣಗೆರೆ:ಕಾಂಗ್ರೆಸ್ನ ಯಾರೋ ಒಬ್ಬರು ಸಿಎಂ ಆಗಬೇಕೆಂಬ ತಿರುಕನ ಕನಸು ಕಾಣ್ತಿದ್ದಾರೆ. ಆದ್ರೆ ಆ ತಿರುಕನ ಕನಸು ನನಸಾಗುವುದಿಲ್ಲ ಎಂದು ಹೇಳುವ ಮೂಲಕ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಕಿದರು.
ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ಹಮ್ಮಿಕೊಂಡಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಮುಂದಿನ ಚುನಾವಣೆಯಲ್ಲಿ 145ಕ್ಕೂ ಹೆಚ್ಚು ಸೀಟ್ ಗೆದ್ದು ಅಧಿಕಾರಕ್ಕೆ ಬರುತ್ತೇವೆ. ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ, ಅಷ್ಟೇ ನಾವು ಅಧಿಕಾರಕ್ಕೆ ಬರುವುದು ಸತ್ಯ. ಆದ್ರೆ ಕಾಂಗ್ರೆಸ್ನವರು ತಿರುಕನ ಕನಸನ್ನು ಕಾಣುತ್ತಿದ್ದಾರೆ. ಅವರು ಯಾವಾಗಲೂ ಅಧಿಕಾರಕ್ಕೆ ಬರೋದಿಲ್ಲ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ನವರು ಹೆಂಡ, ಹಣದ ಬಲದಿಂದ ಚುನಾವಣೆ ಮಾಡಲು ಹೊರಟಿದ್ದಾರೆ. ಜಾತಿ ಧರ್ಮಗಳ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ. ರಾಜ್ಯದ ಎಲ್ಲಾ ಕಡೆ ಕಾಂಗ್ರೆಸ್ ಅನ್ನು ಜನರು ತಿರಸ್ಕರಿಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಎಸ್ ವಿ ರಾಮಚಂದ್ರರನ್ನು 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಿ ಎಂದು ಬಿಎಸ್ವೈ ಜಗಳೂರು ಜನರಿಗೆ ಕರೆ ನೀಡಿದರು.