ಕರ್ನಾಟಕ

karnataka

ETV Bharat / state

ನಾವು ಅಲ್ಪಸಂಖ್ಯಾತರ ವಿರೋಧಿಗಳಲ್ಲ : ಬಿಎಸ್ ಯಡಿಯೂರಪ್ಪ - Hijab

ಜಾತಿಯ ವಿಷ ಬೀಜ ಬಿತ್ತುವ ಕೆಲಸವನ್ನು ಸಿದ್ದರಾಮಯ್ಯ ಬಿಡಬೇಕು. ಅದರಿಂದ ಅವರಿಗೆ ಯಾವುದೇ ಲಾಭ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.

yediyurappa
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

By ETV Bharat Karnataka Team

Published : Dec 24, 2023, 12:15 PM IST

ದಾವಣಗೆರೆ ಜಿಎಂ ಐಟಿ ಅತಿಥಿ ಗೃಹದಲ್ಲಿ ಮಾತನಾಡಿದ ಯಡಿಯೂರಪ್ಪ

ದಾವಣಗೆರೆ : ರಾಜ್ಯದಲ್ಲಿ ಬಿಜೆಪಿ ಪರ ಒಳ್ಳೆಯ ವಾತಾವರಣ ಇದೆ.‌ ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ರಾಜ್ಯದಲ್ಲಿ ಯುವಕರು ಕುಣಿದು ಕುಪ್ಪಳಿಸುತ್ತಿದ್ದಾರೆ. 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವುದು ನಮ್ಮ ಗುರಿ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.

ದಾವಣಗೆರೆ ಜಿಎಂ ಐಟಿ ಅತಿಥಿ ಗೃಹದಲ್ಲಿ ಮಾತನಾಡಿದ ಅವರು, ಹಿಜಾಬ್ ವಿಚಾರದಲ್ಲಿ ನಮ್ಮೆಲ್ಲರ ಆಕ್ರೋಶದ ಹಿನ್ನೆಲೆ ಸಿದ್ದರಾಮಯ್ಯನವರು ಹೇಳಿಕೆ ಹಿಂದೆ ಪಡೆದಿದ್ದಾರೆ.‌ ನಾವು ಅಲ್ಪಸಂಖ್ಯಾತರ ವಿರೋಧಿಗಳಲ್ಲ. ಜಾತಿಯ ವಿಷ ಬೀಜ ಬಿತ್ತುವ ಕೆಲಸ ಸಿದ್ದರಾಮಯ್ಯ ಬಿಡಬೇಕು. ವಿಷ ಬೀಜ ಬಿತ್ತುವುದರಿಂದ ಅವರಿಗೆ ಯಾವುದೇ ಲಾಭ ಆಗಲ್ಲ ಎಂದರು.

ಜಾತಿ ಗಣತಿ ವರದಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿ ಬೇಡ ಎಂಬ ಭಾವನೆ ಬಹುತೇಕರಲ್ಲಿ ಬಂದಿದೆ. ಗಣತಿಯು ವೈಜ್ಞಾನಿಕವಾಗಿ ಆಗಬೇಕು ಎಂಬ ಭಾವನೆ ಇದೆ, ನಾವು ಕೂಡ ಅದನ್ನೇ ಹೇಳುತ್ತೇವೆ. ಇನ್ನೊಮ್ಮೆ ಸಮೀಕ್ಷೆ ಆಗಲಿ ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಇದನ್ನೂ ಓದಿ :ವೈಯಕ್ತಿಕವಾಗಿ ನನಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ: ಸಂತೋಷ್​ ಲಾಡ್

ರಾಜ್ಯ ಬಿಜೆಪಿಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯ ಬಿಜೆಪಿಯ ಪದಾಧಿಕಾರಿಗಳ ಪಟ್ಟಿ ಈಗಾಗಲೇ ಬಿಡುಗಡೆ ಆಗಿದೆ. ಅಳೆದು, ತೂಗಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಎರಡು ಮಾತಿಲ್ಲ. ಒಳ್ಳೆಯ ಪದಾಧಿಕಾರಿಗಳ ಆಯ್ಕೆ ಆಗಿದೆ. ವಿಜಯಪುರ ಶಾಸಕ ಬಸನಗೌಡ ಯತ್ನಾಳ್​ ಬಗ್ಗೆ ಏನೂ ಹೇಳಲ್ಲ ಅವರ ವಿರುದ್ಧ ಹೈಕಮಾಂಡ್​ಗೆ ದೂರು ನೀಡುವ ಪ್ರಯತ್ನ ಸಹ ಮಾಡಲ್ಲ. ಎಲ್ಲವೂ ಸರಿ ಹೋಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ :ನಾವು ಜಾತಿಗಣತಿ ವಿರೋಧಿಗಳಲ್ಲ, ವರದಿಯು ವಾಸ್ತವ, ಸತ್ಯದಿಂದ ಕೂಡಿರಬೇಕು: ಸಚಿವ ಈಶ್ವರ್ ಖಂಡ್ರೆ

ABOUT THE AUTHOR

...view details