ದಾವಣಗೆರೆ :ಸದಾ ಒಂದಲ್ಲ ಒಂದು ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ಮಾಜಿ ಶಾಸಕ ಶಾಂತನಗೌಡ, ಇದೀಗ ಅಧಿಕಾರಿಯೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಸುದ್ದಿಯಾಗಿದ್ದಾರೆ.
ಸರ್ಕಾರಿ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಮಾಜಿ ಶಾಸಕ ಶಾಂತನಗೌಡ.. ವಿಡಿಯೋ ವೈರಲ್ - ಮಾಜಿ ಶಾಸಕ ಶಾಂತನಗೌಡ
ಜಿಲ್ಲೆಯ ಹೊನ್ನಾಳಿಯ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಶಾಂತನಗೌಡ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಕಂದಾಯ ಇಲಾಖೆ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ..
ಸರ್ಕಾರಿ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಮಾಜಿ ಶಾಸಕ ಶಾಂತನಗೌಡ
ಜಿಲ್ಲೆಯ ಹೊನ್ನಾಳಿಯ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಶಾಂತನಗೌಡ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಕಂದಾಯ ಇಲಾಖೆ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.
ಜಿಲ್ಲೆಯ ಹೊನ್ನಾಳಿ ತಾಲೂಕಿನ ಸರ್ಕಾರಿ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಮಳೆಯಿಂದ ಹಾನಿಯಾದ ಜಮೀನುಗಳಿಗೆ ಪರಿಹಾರದ ವಿಚಾರದಲ್ಲಿ ಕಂದಾಯ ನಿರೀಕ್ಷಕರಿಗೆ ನಿಂದಿಸಿರುವ ವಿಡಿಯೋವನ್ನ ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.