ದಾವಣಗೆರೆ:ಕೂಡಲ ಸಂಗಮ ಪೀಠಾಧಿಪತಿ ಜಯಮೃತ್ಯುಂಜಯ ಶ್ರೀಗಳು ಸಮಾಜಕ್ಕಾಗಿ ಹೋರಾಟ ಮಾಡುವವರು. ಆದರೆ, ಇನ್ನೊಬ್ಬರು ಹೈಟೆಕ್ ಸ್ವಾಮಿಗಳು. ಕುಂತಲ್ಲೇ ಫೇಸ್ಬುಕ್ ಮೂಲಕ ಪ್ರಧಾನಿ ನರೇಂದ್ರ ಮೋದಿ, ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಬೆಂಬಲ ಪಡೆಯುವವರು ಎಂದು ಹೇಳುವ ಮೂಲಕ ಜೆಡಿಎಸ್ ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ಅವರು ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೆಸರು ಪ್ರಸ್ತಾಪಿಸದೇ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದ ಮೂಲಕ ಸ್ವಾಮೀಜಿಯೊಬ್ಬರು ಪ್ರಚಾರ ಪಡೆಯುತ್ತಾರೆ. ಅವರ ಅನುಕೂಲಕ್ಕಾಗಿ ಹೋರಾಟ ಮಾಡುತ್ತಾರೆ. ಅವರದ್ದು ಕೇವಲ ವೈಭವೀಕರಣ. ವಾಟ್ಸ್ಆ್ಯಪ್ ಮೂಲಕ ಕೆಲಸ ಮಾಡುತ್ತಾರೆ ಅಷ್ಟೇ. ಸಮಾಜಕ್ಕಾಗಿ ಕೇವಲ ಬೆರಳೆಣಿಕೆಯಷ್ಟು ಶ್ರೀಗಳು ಹೋರಾಟ ನಡೆಸಿದ್ದಾರೆ ಎಂದು ಹೇಳಿದರು.