ಕರ್ನಾಟಕ

karnataka

By

Published : Apr 27, 2021, 9:42 AM IST

ETV Bharat / state

ಸಾಸ್ವೆಹಳ್ಳಿ ಏತನೀರಾವರಿ ಯೋಜನೆಯ ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ: ಸಂಸದ ಸಿದ್ದೇಶ್ವರ್​​

ಸಾಸ್ವೆಹಳ್ಳಿ ಏತನೀರಾವರಿ ಯೋಜನೆಯ ಭೂ ಸ್ವಾಧೀನ ಪ್ರಕ್ರಿಯೆಯನ್ನು ಆದಷ್ಟು ಬೇಗ ಮುಗಿಸಿ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್, ಅಧಿಕಾರಿಗಳಿಗೆ ಸೂಚಿಸಿದರು.

g m siddeshwara meeting
ಸಂಸದ ಜಿ.ಎಂ. ಸಿದ್ದೇಶ್ವರ್ ನೇತೃತ್ವದ ಸಭೆ

ದಾವಣಗೆರೆ: ಜಿಲ್ಲೆಯ ಸಾಸ್ವೆಹಳ್ಳಿ ಏತನೀರಾವರಿ ಯೋಜನೆಯ ಭೂ ಸ್ವಾಧೀನ ಪ್ರಕ್ರಿಯೆಯನ್ನು ವೇಗವಾಗಿ ಪೂರ್ಣಗೊಳಿಸಿ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್, ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್​ನಲ್ಲಿ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪಂಪ್‍ ಹೌಸ್‍ಗಳು, ಡೆಲಿವರಿ ಛೇಂಬರ್​​ಗಳು, ಎಲೆಕ್ಟ್ರಿಕಲ್ ಸಬ್‍ ಸ್ಟೇಷನ್‍ಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ನಿರ್ಮಿಸಬೇಕಿರುವ ವಿದ್ಯತ್ ಟವರ್​​ಗಳ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲ ಭೂ ಸ್ವಾಧೀನ ಪ್ರಕ್ರಿಯೆಗಳನ್ನು ವಿಳಂಬಕ್ಕೆ ಅವಕಾಶ ನೀಡದಂತೆ ತ್ವರಿತವಾಗಿ ಪೂರ್ಣಗೊಳಿಸಬೇಕೆಂದರು. ಇದರಲ್ಲಿ ಯಾವುದೇ ಅಡೆತಡೆಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ:ಉಡುಪಿಯ ಮನೆ ತಾರಸಿ ಮೇಲೆ ಬಗೆಬಗೆ ತರಕಾರಿ, ಹಣ್ಣು ಬೆಳೆ: ನೀವೂ ಬೆಳೆಯಬೇಕೆ?

ಸಾಸ್ವೆಹಳ್ಳಿ ಏತನೀರಾವರಿ ಯೋಜನೆಯಡಿ ಜಾಕ್‍ವೆಲ್ ಕಮ್ ಪಂಪ್‍ಹೌಸ್, ಡೆಲಿವರಿ ಛೇಂಬರ್, ಎಲೆಕ್ಟ್ರಿಕಲ್ ಸಬ್‍ ಸ್ಟೇಷನ್, ರೈಸಿಂಗ್ ಮೈನ್‍ಗಳ ನಿರ್ಮಾಣಕ್ಕಾಗಿ ಹೊನ್ನಾಳಿ ತಾಲೂಕಿನಲ್ಲಿ 6 ಎಕರೆ 3 ಗುಂಟೆ ಹಾಗೂ ಚನ್ನಗಿರಿ ತಾಲೂಕಿನಲ್ಲಿ 9 ಎಕರೆ 14 ಗುಂಟೆ ಸೇರಿದಂತೆ 15 ಎಕರೆ 17 ಗುಂಟೆ ಭೂ ಸ್ವಾಧೀನ ಮಾಡಿಕೊಳ್ಳಲಾಗುತ್ತದೆ. ಈಗಾಗಲೇ ಸಾಸ್ವೆಹಳ್ಳಿ ಗ್ರಾಮದಲ್ಲಿ 3 ಎಕರೆ 3 ಗುಂಟೆಗೆ ಸಂಬಂಧಿಸಿದಂತೆ ಭೂಮಿ ಕಳೆದುಕೊಳ್ಳುವ ರೈತರಿಗೆ ಕಳೆದ ವರ್ಷ ಮೇ ತಿಂಗಳಿನಲ್ಲಿ ಶೇ. 50ರಷ್ಟು ಪರಿಹಾರ ಹಣ ಪಾವತಿಸಲಾಗಿದೆ ಎಂದರು.

ABOUT THE AUTHOR

...view details