ಕರ್ನಾಟಕ

karnataka

ETV Bharat / state

ಗಂಗಾಮತ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ಒತ್ತಾಯ - Davanagere

ನೂತನವಾಗಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಗಂಗಾಮತ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.

gangamata community demand for the ministerial position

By

Published : Aug 2, 2019, 4:52 PM IST

ದಾವಣಗೆರೆ:ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ಹೆಚ್ಚಿದೆ. ಅತ್ಯಂತ ಹಿಂದುಳಿದ ಸಮುದಾಯ ಎನಿಸಿಕೊಂಡಿರುವ ಗಂಗಾಮತ ಸಮಾಜದ ಶಾಸಕ ಅಥವಾ ಪರಿಷತ್​ ಸದಸ್ಯರೊಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗಂಗಾಮತ (ಬೆಸ್ತರ) ಸಮುದಾಯದ ಸಂಘದ ಕಾರ್ಯಾದರ್ಶಿ ಜೆ.ಉಮೇಶ್ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆ.ಉಮೇಶ್

30 ವರ್ಷಗಳಿಂದ ಎಬಿವಿಪಿ ವಿದ್ಯಾರ್ಥಿ ಸಂಘಟನೆಯ ಮೂಲಕ ರಾಜಕೀಯ ಪ್ರವೇಶಿಸಿದ್ದಾರೆ. ಅವರಿಗೆ ಸಚಿನ ಸ್ಥಾನ ನೀಡಿದರೆ, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಸಮಾಜಕ್ಕೆ ಶ್ರಮಿಸಲಿದ್ದಾರೆ. ರವಿಕುಮಾರ್ ಅವರು ಮೂಲತಃ ಜಿಲ್ಲೆಯ ಜಗಳೂರು ತಾಲೂಕಿನ ಉಚ್ಚಂಗಿಪುರ ಗ್ರಾಮದವವರು. ಅಲ್ಲದೆ, ಈ ಸಮಾಜದ ವಿದ್ಯಾವಂತ ರಾಜಕಾರಣಿ. ಸಚಿವ ಸ್ಥಾನ ಕೊಟ್ಟರೆ ಜಿಲ್ಲೆಯ ಅಭಿವೃದ್ಧಿಗೂ ಒತ್ತು ನೀಡಲಿದ್ದಾರೆ ಎಂದು ಹೇಳಿದರು.

ABOUT THE AUTHOR

...view details