ದಾವಣಗೆರೆ:ನಾಮಕಾವಾಸ್ತೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿತ್ತು. ಸ್ವಾಭಿಮಾನಕ್ಕೆ ಧಕ್ಕೆ ಬಂದಿದ್ದರಿಂದ ಹೆಚ್. ವಿಶ್ವನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದಷ್ಟು ಬೇಗ ಜೆಡಿಎಸ್ನಿಂದಲೂ ಹೊರ ಬರಬೇಕು ಎಂದು ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಪರೋಕ್ಷವಾಗಿ ಬಿಜೆಪಿಗೆ ಆಹ್ವಾನ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಕರೆತಂದು ಸಚಿವ ಸ್ಥಾನ ನೀಡಲಿಲ್ಲ. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಸ್ವಾಭಿಮಾನಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಹಾಗೆಯೇ ಜೆಡಿಎಸ್ ಪಕ್ಷ ಬಿಟ್ಟರೆ ಒಳ್ಳೆಯದು ಎಂದು ರೇಣುಕಾಚಾರ್ಯ ಹೇಳಿದರು.
ನಿಂಬೆಹಣ್ಣಿನಿಂದ ದೇವೇಗೌಡರ ಸೋಲು :