ದಾವಣಗೆರೆ:ಜಿಲ್ಲೆಯಲ್ಲಿ ವೈರಲ್ ಫೀವರ್ ಹಾಗೂ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಆತಂಕದ ನಡುವೆ ಜ್ವರದಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ತೀವ್ರ ಜ್ವರದಿಂದ ಬಳಲುತ್ತಿದ್ದ 14 ವರ್ಷದ ಬಾಲಕಿ ಸುಮಯ್ಯಾ ಕೌಸರ್ ಮೃತ ಬಾಲಕಿ ಎಂದು ತಿಳಿದು ಬಂದಿದೆ.
ದಾವಣಗೆರೆ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಡೆಂಗ್ಯೂ; ಜ್ವರದಿಂದ ಬಳಲುತ್ತಿದ್ದ ಬಾಲಕಿ ಸಾವು - ಡೆಂಗ್ಯೂ ಜ್ವರ,
ದಾವಣಗೆರೆ ಜಿಲ್ಲೆಯಲ್ಲಿ ದಿನದಿಂದ ದನಕ್ಕೆ ವೈರಲ್ ಫೀವರ್ ಹಾಗೂ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಜ್ವರಕ್ಕೆ ಬಾಲಕಿಯೊಬ್ಬಳು ಬಲಿಯಾಗಿದ್ದಾಳೆ. ಈ ಘಟನೆ ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.
![ದಾವಣಗೆರೆ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಡೆಂಗ್ಯೂ; ಜ್ವರದಿಂದ ಬಳಲುತ್ತಿದ್ದ ಬಾಲಕಿ ಸಾವು Girl died due to dengue in Davanagere](https://etvbharatimages.akamaized.net/etvbharat/prod-images/768-512-13140797-446-13140797-1632318037143.jpg)
ಈಟಿವಿ ಭಾರತಕ್ಕೆ ಈ ಬಗ್ಗೆ ಮಾಹಿತಿ ನೀಡಿದ ಡಿಹೆಚ್ಓ ಡಾ. ನಾಗರಾಜ್, ಇದು ಶಂಕಿತ ಡೆಂಗ್ಯೂ ಪ್ರಕರಣ. ಆದರೆ, ಸಾವಿಗೆ ಇದೇ ಕಾರಣವೆಂದು ಇನ್ನೂ ಖಚಿತವಾಗಿಲ್ಲ. ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿಯು ನಗರದ ಬಾಪೂಜಿ ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ, ಕಳೆದ ದಿನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ ಎಂದಿದ್ದಾರೆ.
ಜ್ವರದಿಂದ ಬಳಲುತ್ತಿದ್ದ ಬಾಲಕಿ ಸುಮಯ್ಯಾ ಕೌಸರ್ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಗ್ರಾಮದ ಮುಜಾಹಿದ್ ಎಂಬುವರ ಪುತ್ರಿ ಎಂದು ತಿಳಿದು ಬಂದಿದೆ. ದಿನದಿಂದ ದಿನಕ್ಕೆ ವೈರಲ್ ಫೀವರ್ ಹಾಗೂ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದು ಜಿಲ್ಲೆಯ ಜನರಲ್ಲಿ ಆತಂಕದ ಮೂಡಿಸಿದೆ.