ಕರ್ನಾಟಕ

karnataka

ETV Bharat / state

ಸಚಿವ ಸಂಪುಟ ವಿಸ್ತರಣೆಯಲ್ಲಿ ವಾಲ್ಮೀಕಿ ಸಮುದಾಯಕ್ಕೆ ಅವಕಾಶ ನೀಡಿ : ವಾಲ್ಮೀಕಿ ಶ್ರೀ ಡಿಮ್ಯಾಂಡ್ - ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

ಸಚಿವ ಸಂಪುಟ ವಿಸ್ತರಣೆಯಲ್ಲಿ ನಮ್ಮ ಸಮುದಾಯದ ಆಕಾಂಕ್ಷಿಗಳಿಗೆ ಒಂದು ಅವಕಾಶ ಮಾಡಿಕೊಡಿ ಎಂದು ಸಿಎಂಗೆ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಒತ್ತಾಯಿಸಿದ್ದಾರೆ.

valmiki-prasanananda-swamiji
ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

By

Published : Feb 5, 2020, 7:51 PM IST

ದಾವಣಗೆರೆ:ಸಚಿವ ಸಂಪುಟ ವಿಸ್ತರಣೆಯಲ್ಲಿ ನಮ್ಮ ಸಮುದಾಯದ ಆಕಾಂಕ್ಷಿಗಳಿಗೆ ಒಂದು ಅವಕಾಶ ಮಾಡಿಕೊಡಿ ಎಂದು ಸಿಎಂಗೆ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಒತ್ತಾಯಿಸಿದ್ದಾರೆ.

ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಪೀಠದಲ್ಲಿ ಮಾತನಾಡಿದ ಶ್ರೀಗಳು, ವಾಲ್ಮೀಕಿ ಸಮಾಜದವರಿಗೆ ಒಂದು ಸ್ಥಾನದ ಅವಕಾಶ ಮಾಡಿಕೊಡಬೇಕು. ನಾವೇನು ನಮ್ಮ ಸಮಾಜಕ್ಕೆ 25 ಸ್ಥಾನ ನೀಡಿ ಎಂದು ಕೇಳುತ್ತಿಲ್ಲ ಎಂದರು.

ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ
ವಾಲ್ಮೀಕಿ ಸಮುದಾಯಕ್ಕೆ ಶೇ.2.5 ರಷ್ಟು ಮೀಸಲಾತಿ ನೀಡಬೇಕು. ಈ ಸಂಬಂಧ ಈಗಾಗಲೇ ಸಿಎಂ ಭೇಟಿಯಾಗಿ ಒತ್ತಾಯ ಮಾಡಿದ್ದೇವೆ.‌ ಹರಿಹರದ ರಾಜನಹಳ್ಳಿಯಲ್ಲಿ ಫೆ 8.9 ರಂದು ನಡೆಯುವ ವಾಲ್ಮೀಕಿ ಜಾತ್ರೆಗೆ ಮುನ್ನ ವರದಿ ಬರುವ ವಿಶ್ವಾಸ ಇದೆ. ಆದಷ್ಟು ಬೇಗ ವರದಿ ತರಿಸಿಕೊಳ್ಳುವ ಪ್ರಯತ್ನಗಳು ನಡೆದಿವೆ. ಹಾಗಾಗಿ ಸಿಎಂ ಯಡಿಯೂರಪ್ಪ ಅವರು ಈ ಜಾತ್ರೆಯಲ್ಲಿಯೇ ಮೀಸಲಾತಿ ಬಗ್ಗೆ ಪ್ರಕಟಿಸಬೇಕು ಎಂದರು.

ABOUT THE AUTHOR

...view details