ದಾವಣಗೆರೆ:ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಆಣೆ, ಪ್ರಮಾಣ ಮಾಡಿ ಮತ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಎರಡು ಗುಂಪುಗಳು ಗಲಾಟೆ ನಡೆದಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಶೆಟ್ಟಿಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ದೇವಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಶೆಟ್ಟಿಗೊಂಡನಹಳ್ಳಿಯಲ್ಲಿ ಚುನಾವಣೆ ಪ್ರಚಾರದ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಬೇರೆ ಗ್ರಾಮದ ಬಸಾಪುರ ರವಿ ಎಂಬುವರು ಶೆಟ್ಟಿಗೊಂಡನಹಳ್ಳಿ ಗ್ರಾಮದಲ್ಲಿ ಗಿರಿಜಮ್ಮ ಹಾಗೂ ಮಂಜಮ್ಮ ಎನ್ನುವರ ಪರವಾಗಿ ಪ್ರಚಾರಕ್ಕೆ ಬಂದಿದ್ದ. ಈ ವೇಳೆ ಈತ ಬಲವಂತವಾಗಿ ಜನರಲ್ಲಿ ಆಣೆ, ಪ್ರಮಾಣ ಮಾಡಿಸಿಕೊಂಡು ಪ್ರಚಾರ ಮಾಡುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.