ದಾವಣಗೆರೆ:ಅಪರಿಚಿತ ವಾಹನ ಡಿಕ್ಕಿ ಹೊಡೆದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ.ವಾಸುದೇವನ್ ಸಾವನ್ನಪ್ಪಿದ್ದಾರೆ. ಈ ಘಟನೆ ಜಗಳೂರು ತಾಲೂಕಿನ ಕಲ್ಲೆದೇವಪುರ-ಬಸಪ್ಪನಟ್ಟಿ ಗ್ರಾಮಗಳ ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿಯಾಗಿ ಕನ್ನಡ ವಿವಿ ಪ್ರಾಧ್ಯಾಪಕ ಪ್ರೊ.ವಾಸುದೇವನ್ ಸಾವು - ಜಗಳೂರು ಪೊಲೀಸ್ ಠಾಣೆ
ಕಾರು ಅಪಘಾತದಲ್ಲಿ ಹಂಪಿ ವಿವಿಯ ಪ್ರೊ.ವಾಸುದೇವನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪುತ್ರ ಹಾಗು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿವೆ.
![ಅಪರಿಚಿತ ವಾಹನ ಡಿಕ್ಕಿಯಾಗಿ ಕನ್ನಡ ವಿವಿ ಪ್ರಾಧ್ಯಾಪಕ ಪ್ರೊ.ವಾಸುದೇವನ್ ಸಾವು Hampi Kannada University Lecturer Prof. Vasudevan dies in road accident](https://etvbharatimages.akamaized.net/etvbharat/prod-images/768-512-17044090-thumbnail-3x2-dw.jpg)
ಅಪರಿಚಿತ ವಾಹನ ಡಿಕ್ಕಿ ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಪ್ರೊ.ವಾಸುದೇವನ್ ಸಾವು....
ಪ್ರೊ.ವಾಸುದೇವನ್ ಸ್ಥಳದಲ್ಲಿಯೇ ಸಾವನ್ನಪ್ಪಿದರೆ ಅವರೊಂದಿಗೆ ಕಾರಲ್ಲಿದ್ದ ಪುತ್ರ ಹಾಗು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಎಸ್ ಎಸ್ ಹೈಟೆಕ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.