ಹರಿಹರ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನಡೆದ ಚುನಾವಣೆಯಲ್ಲಿ ಸಾರಥಿ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬಿ. ಹನುಮಂತರೆಡ್ಡಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಕೊಕ್ಕನೂರು ಕ್ಷೇತ್ರದ ಬಿಜೆಪಿ ಬೆಂಬಲಿತ ಕೆ. ಬಸವರಾಜ್ ಉಪಾಧ್ಯಕ್ಷರಾಗಿ ಮುಂದುವರೆದಿದ್ದಾರೆ.
ಹರಿಹರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ ನಾಲ್ವರು ಸದಸ್ಯರು, ಜೆಡಿಎಸ್ ಬೆಂಬಲಿತ ಐವರು ಸದಸ್ಯರು ಮತ್ತು ರೈತರಿಂದ ಆಯ್ಕೆಯಾದ ಬಿಜೆಪಿ ಬೆಂಬಲಿತ ಮೂವರು ಸದಸ್ಯರು ಹಾಗೂ ಸರ್ಕಾರದಿಂದ ನಾಮನಿರ್ದೇಶಿತ ಮೂವರು ಸದಸ್ಯರು ಸೇರಿ ಒಟ್ಟು 15 ಸದಸ್ಯರಿದ್ದಾರೆ.
ಹರಿಹರ: ಎಪಿಎಂಸಿ ನೂತನ ಅಧ್ಯಕ್ಷರಾಗಿ ಹನುಮಂತರೆಡ್ಡಿ ಅವಿರೋಧ ಆಯ್ಕೆ - Harihara apmc
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನಡೆದ ಚುನಾವಣೆಯಲ್ಲಿ ಸಾರಥಿ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬಿ. ಹನುಮಂತರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದು, ಕೊಕ್ಕನೂರು ಕ್ಷೇತ್ರದ ಬಿಜೆಪಿ ಬೆಂಬಲಿತ ಕೆ. ಬಸವರಾಜ್ ಉಪಾಧ್ಯಕ್ಷರಾಗಿ ಮುಂದುವರೆದಿದ್ದಾರೆ.
ಸಮಿತಿಯಲ್ಲಿ ಬಿಜೆಪಿ-ಕಾಂಗ್ರೆಸ್ ಸಮ್ಮಿಶ್ರ ಆಡಳಿತ ನಡೆಸುತ್ತಿದ್ದು, ಕಳೆದ ಬಾರಿ ಯಲವಟ್ಟಿ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಾಂತಮ್ಮರವರನ್ನು ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಅಧ್ಯಕ್ಷ ಸ್ಥಾನವನ್ನು ಬಿಟ್ಟು ಕೊಡಲಾಗಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯನ್ನೇ ಮುಂದುವರೆಸಲಾಗಿದೆ.
ತಹಶೀಲ್ದಾರ್ ಕೆ.ಬಿ ರಾಮಚಂದ್ರಪ್ಪ ಅವರು ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಮಾಜಿ ಶಾಸಕರಾದ ಬಿ.ಪಿ ಹರೀಶ್, ನಗರಸಭಾ ಸದಸ್ಯರಾದ ಶಂಕರ್ ಖಟಾವಕರ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ಎಚ್.ಎಚ್ ಬಸವರಾಜ್ ಬೆಳ್ಳೂಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಮಹದೇವಪ್ಪ, ಮಂಜುನಾಥ್ ಪಾಟೀಲ್, ಶೇಖಣ್ಣ, ನರೇಂದ್ರ ಕುಮಾರ, ಹಾಗೂ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.