ಹರಿಹರ(ದಾವಣಗೆರೆ): ತಾಲೂಕಿನ ರಾಜನಹಳ್ಳಿ ಗ್ರಾಮದ ಗರ್ಭಿಣಿ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಗ್ರಾಮವನ್ನ ಸೀಲ್ಡೌನ್ ಮಾಡಲಾಗಿದೆ.
ಹರಿಹರ: ಗರ್ಭಿಣಿ ಮಹಿಳೆಗೆ ಕೊರೊನಾ ಪಾಸಿಟಿವ್... ಸ್ಥಳೀಯರಲ್ಲಿ ಆತಂಕ! - Corona Positive for Pregnant Woman
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದ ಗರ್ಭಿಣಿ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಹರಿಹರ ಜನರಲ್ಲಿ ಆತಂಕ ಮೂಡಿಸಿದೆ.
ಹರಿಹರ: ಗರ್ಭಿಣಿ ಮಹಿಳೆಗೆ ಕೊರೊನಾ ಪಾಸಿಟಿವ್...ಸ್ಥಳೀಯರಲ್ಲಿ ಆತಂಕ
ಸೊಂಕಿತೆ ಗಭಿರ್ಣಿಯಾಗಿರುವ ಕಾರಣ, ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋದಾಗ ವೈದ್ಯರು, ಸರ್ಕಾರಿ ಆಸ್ಪತ್ರೆಗೆ ತೆರಳಿ ಕೊವೀಡ್ ಪರೀಕ್ಷೆ ಮಾಡಿಸುವಂತೆ ತಿಳಿಸಿದ್ದರು. ಜೂ. 13ರಂದು ಗಂಟಲು ದ್ರವ ಪಡೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಆಕೆಯ ವರದಿ ಬಂದಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ಮಹಿಳೆಯ ಗಂಡನ ಮನೆ ಹರಿಹರ ನಗರ ಪ್ರದೇಶದಲ್ಲಿದ್ದು, ಕೆಲವು ದಿನಗಳ ಹಿಂದೆ ರಾಜನಹಳ್ಳಿಯ ತಾಯಿಯ ಮನೆಗೆ ಹೋಗಿದ್ದರು.
ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಹರಿಹರ ಜನರಲ್ಲಿ ಆತಂಕ ಮೂಡಿಸಿದೆ.