ಕರ್ನಾಟಕ

karnataka

ETV Bharat / state

ಪ್ರತಿ ಸೋಮವಾರ ಜನಸ್ಪಂದನ ಸಭೆ: ತಹಶೀಲ್ದಾರ್ ಕೆ.ಬಿ.ರಾಮಚಂದ್ರಪ್ಪ

ಪ್ರತಿ ತಾಲೂಕು ಮಟ್ಟದ ಸರ್ಕಾರಿ ಕಚೇರಿಗಳಲ್ಲಿ ಪ್ರತಿ ತಿಂಗಳ ಮೊದಲ ಸೋಮವಾರ ಎಲ್ಲಾ ಇಲಾಖೆಯ ಅಧಿಕಾರಿಗಳು ಸೇರಿ ಸಾರ್ವಜನಿಕರ ಕುಂದು ಕೊರತೆ ಸಭೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.

K.B Ramachandrappa
ಜನ ಸ್ಪಂದನ ಸಭೆ

By

Published : Feb 5, 2020, 5:15 PM IST

ಹರಿಹರ:ಪ್ರತಿ ತಾಲೂಕು ಮಟ್ಟದ ಸರ್ಕಾರಿ ಕಚೇರಿಗಳಲ್ಲಿ ಪ್ರತಿ ತಿಂಗಳ ಮೊದಲ ಸೋಮವಾರ ಎಲ್ಲಾ ಇಲಾಖೆಯ ಅಧಿಕಾರಿಗಳು ಸೇರಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತದ ವತಿಯಿಂದ ಸಭೆ ನಡೆಸುತ್ತಿದ್ದೇವೆ ಎಂದು ತಹಶೀಲ್ದಾರ್ ಕೆ.ಬಿ.ರಾಮಚಂದ್ರಪ್ಪ ತಿಳಿಸಿದರು.

ನಗರದ ಮಿನಿ ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ನಿರ್ದೇಶನದಂತೆ ಸಭೆಯಲ್ಲಿ ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಿ ಸಭೆಯ ದಿನ ಅಗತ್ಯ ಮಾಹಿತಿ ಒದಗಿಸಬೇಕು ಎಂದರು.

ಜನರ ಅಹವಾಲುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಈ ಹೊಸ ಕಾರ್ಯವನ್ನು ಜಾರಿ ಮಾಡಿದ್ದಾರೆ. ಇದರಿಂದ ಸಾವಿರಾರು ಕುಟುಂಬಗಳ ಸಂಕಷ್ಟ ಪರಿಹಾರವಾಗುತ್ತಿವೆ. ಈ ಕಾರ್ಯ ಯಶಸ್ವಿಯಾಗಬೇಕಾದರೆ ಪ್ರತಿಯೊಬ್ಬ ಅಧಿಕಾರಿಗಳು ಇದರಲ್ಲಿ ಭಾಗಿಯಾಗಬೇಕು ಎಂದು ಸೂಚಿಸಿದರು. ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಜನಸ್ಪಂದನ ಸಭೆಗೆ ತಪ್ಪದೇ ಹಾಜರಾಗಬೇಕು. ಒಂದು ವೇಳೆ ಸಭೆಗೆ ಗೈರಾಗಿದ್ದಲ್ಲಿ ಅಂತಹ ಅಧಿಕಾರಿಗಳ ಮಾಹಿತಿಯನ್ನು ಡಿಸಿ ಅವರಿಗೆ ಸಲ್ಲಿಸಲಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.

ಹರಿಹರದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಜನಸ್ಪಂದನ ಸಭೆ

ಇನ್ಮುಂದೆ ಪ್ರತಿ ಸೋಮವಾರ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ಸಾರ್ವಜನಿಕರಿಗೆ ಲಭ್ಯವಾಗಬೇಕು. ಜನರ ಮನವಿಗಳಿಗೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ತಾಲೂಕಿನ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಿ, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಜಮೀನಿನ ಪಹಣಿ, ಜನನ-ಮರಣ ಪ್ರಮಾಣ ಪತ್ರ, ಭೂ ಸರ್ವೇ, ಹಿರಿಯರ ಪಿಂಚಣಿ, ಅಂಗವಿಕಲ, ವಿಧವಾ ವೇತನ, ಕೃಷಿ ಇಲಾಖೆಯ ಯಂತ್ರೋಪಕರಣ ಸೌಲಭ್ಯ, ಪಶು ಇಲಾಖೆಯಲ್ಲಿ ಉತ್ತಮ ಔಷಧಿಗಳ ಕೊರತೆ, ನಗರ ಸಭೆಯಲ್ಲಿ ಖಾತೆ ವರ್ಗಾವಣೆ, ಫ್ಲೋರೈಡ್ ನೀರಿನ ಸಮಸ್ಯೆಗಳನ್ನು ಪರಿಹರಿಸುವಂತೆ ತಹಶೀಲ್ದಾರ್‌ಗೆ ಸಾರ್ವಜನಿಕರು ಮನವಿ ಮಾಡಿದರು.

ABOUT THE AUTHOR

...view details