ದಾವಣಗೆರೆ: ನಗರದಲ್ಲಿ ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಸುಮಾರು 30 ಕ್ಕೂ ಹೆಚ್ಚು ಮನೆಗಳು ಧರೆಗುರುಳಿವೆ. ಅಲ್ಲದೆ ನಿನ್ನೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದು, ಮೃತನನ್ನು ಎಸ್. ಎಂ. ಕೃಷ್ಣನಗರದ ಅಶೋಕ್ ಎಂದು ಗುರುತಿಸಲಾಗಿದೆ.
ದಾವಣಗೆರೆಯಲ್ಲಿ ಸುರಿದ ಮಳೆಗೆ ಓರ್ವ ಬಲಿ: 30 ಕ್ಕೂ ಹೆಚ್ಚು ಮನೆಗಳ ಕುಸಿತ - ದಾವಣಗೆರೆಯಲ್ಲಿ ಸುರಿದ ಮಳೆಗೆ ಓರ್ವ ಬಲಿ
ದಾವಣಗೆರೆಯಲ್ಲಿ ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಸುಮಾರು 30 ಕ್ಕೂ ಹೆಚ್ಚು ಮನೆಗಳು ಧರೆಗುರುಳಿವೆ. ಅಲ್ಲದೆ ನಿನ್ನೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾನೆ.
ಇನ್ನು ದೊಡ್ಡ ಬೂದಿಹಾಳ್ ಗ್ರಾಮದಲ್ಲಿ ನೆರೆಯಿಂದಾಗಿ ಸುಮಾರು ಹತ್ತಕ್ಕೂ ಹೆಚ್ಚು ಮನೆಗಳು ಕುಸಿದು ಬಿದ್ದಿವೆ. ಬಾಷಾ ನಗರ, ಅಹಮದ್ ನಗರ, ಆಜಾದ್ ನಗರ, ರೈಲ್ವೆ ಗೇಟ್ ಬದಿಯ ಛಲವಾದಿ ಕೇರಿಗಳಲ್ಲಿಯೂ ನೀರು ನುಗ್ಗಿತ್ತು. ಮನೆಗಳಿಂದ ನೀರು ಹೊರಹಾಕುವಲ್ಲಿ ಮಹಿಳೆಯರು ಹರಸಾಹಸ ಪಡಬೇಕಾಯಿತು. ಅಲ್ಲದೆ ಚಾಮರಾಜಪೇಟೆ ವೃತ್ತದ ಬಳಿಯ ಹಳೆಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೀರು ನುಗ್ಗಿದ ಪರಿಣಾಮ ಬಾಣಂತಿಯರು, ಮಹಿಳೆಯರು ಪರದಾಡಬೇಕಾಯಿತು.
ಸಂಕಷ್ಟಕ್ಕೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಜಿ. ಎನ್. ಶಿವಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಸಂತ್ರಸ್ತರ ಅಹವಾಲು ಆಲಿಸಿದ ಅವರು ಪರ್ಯಾಯ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಿದ್ರು.