ದಾವಣಗೆರೆ: ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ಈ ಮಳೆ ನೀರು ಸಂಗ್ರಹದಿಂದ ಬೆಳೆ ಬೆಳೆಯಲು ಅನುಕೂಲವಾಗತ್ತೆ ಅಂತಾ ರೈತರು ಖುಷಿ ಪಡ್ತಿದ್ದಾರೆ. ಆದ್ರೆ, ಜನ ಸಾಮಾನ್ಯರ ಬದುಕು ಬೀದಿಗೆ ಬಿದ್ದಿದೆ.
ಜಿಲ್ಲೆಯ ಹೊನ್ನಾಳಿ, ಹರಿಹರ ಹಾಗೂ ನ್ಯಾಮತಿ ತಾಲೂಕಿನ ನದಿ ಪಾತ್ರದ ಹಳ್ಳಿಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಹೊನ್ನಾಳಿ ಪಟ್ಟಣದ ಬಾಲ್ ರಾಜ್ ಘಾಟ್ನಲ್ಲಿ 22 ಮನೆಗಳು, ಹರಿಹರ ತಾಲೂಕಿನ ಗಂಗಾನಗರದಲ್ಲಿ ಹಲವು ಮನೆಗಳು ಜಲಾವೃತವಾಗಿದ್ದರಿಂದ ಅಂದಾಜು 240 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಈ ಹಿನ್ನೆಲೆ ಡಿಸಿ ಮಹಾಂತೇಶ್ ಬೀಳಗಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆ ಆಲಿಸಿದ್ದಾರೆ.