ಕರ್ನಾಟಕ

karnataka

ETV Bharat / state

ಮಹಿಳೆಯರ ರಕ್ಷಣೆಗೆ ದಾವಣಗೆರೆಯಲ್ಲಿ ಸಹಾಯವಾಣಿ: ಪೊಲೀಸ್​​​ ವಾಹನದಲ್ಲಿ ಡ್ರಾಪ್​​​​ ವ್ಯವಸ್ಥೆ! - Helpline for women's protection latest news

ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆಯು ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ 24X7 ಸಹಾಯವಾಣಿ, ಕೆಎಸ್​​​ಪಿ ಆ್ಯಪ್ ಪರಿಚಯಿಸಿದೆ.

davanagere
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ

By

Published : Dec 12, 2019, 10:34 AM IST

ದಾವಣಗೆರೆ:ದೇಶದ ಹಲವು ರಾಜ್ಯಗಳಲ್ಲಿ ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ಹೆಚ್ಚುತ್ತಿದ್ದಂತೆ ಪೊಲೀಸ್ ಇಲಾಖೆಯೂ ಎಚ್ಚೆತ್ತುಕೊಂಡಿದೆ. ಮಹಿಳೆಯರ ಸುರಕ್ಷತೆಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದೇ ರೀತಿಯಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆಯು ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ 24X7 ಸಹಾಯವಾಣಿ, ಕೆಎಸ್​​ಪಿ ಆ್ಯಪ್ ಪರಿಚಯಿಸಿದೆ.

ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ

ಮಹಿಳೆಯರ ರಕ್ಷಣೆಗೆ ರಾಜ್ಯ ಪೊಲೀಸರು ಭದ್ರತೆ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದಾರೆ. ಪೊಲೀಸ್ ವಾಹನದಲ್ಲಿ ಡ್ರಾಪ್ ವ್ಯವಸ್ಥೆ ಸೇರಿದಂತೆ ಗಸ್ತನ್ನು ಹೆಚ್ಚಿಸಲಾಗಿದೆ. ರಾತ್ರಿ 11 ಗಂಟೆ ನಂತರ ತಡವಾಗಿ ಮನೆಗೆ ತೆರಳುವ ಮಹಿಳೆಯರಿಗೆ ವಾಹನಗಳು ಸಿಗದಿದ್ದರೆ ಅಂತವರು ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಈ ವೇಳೆ ಪೊಲೀಸರು ಅಂತವರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಿದ್ದಾರೆ.

ಈ ಸಂಬಂಧ ಕೆಎಸ್​​​​ಪಿ ಆ್ಯಪ್ ಬಿಡುಗಡೆ ಮಾಡಿದ್ದು, ಇದರ ಮೂಲಕ ಮಹಿಳೆಯರು ಕಷ್ಟದ ಪರಿಸ್ಥಿತಿಯಲ್ಲಿ ಪೊಲೀಸರ ಸಹಾಯ ಪಡೆಯಬಹುದಾಗಿದೆ. ಅಲ್ಲದೇ, ರಾತ್ರಿ ವೇಳೆ ಅಹಿತಕರ ಘಟನೆಗಳನ್ನು ತಡೆಯುವ ಉದ್ದೇಶದಿಂದ ನೈಟ್ ಬೀಟ್ ಹೆಚ್ಚಿಸಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details