ಕರ್ನಾಟಕ

karnataka

ETV Bharat / state

ಕಾಲೇಜುಗಳ ಪುನಾರಂಭದ ಬಗ್ಗೆ ಉನ್ನತ ಶಿಕ್ಷಣ ಸಚಿವರು ಹೇಳ್ತಾರೆ: ಭೈರತಿ ಬಸವರಾಜ್ - ನ.23 ರಿಂದ ಕಾಲೇಜುಗಳು ಪುನಾರಂಭ

ದಾವಣಗೆರೆ ಜಿಲ್ಲೆಯಲ್ಲಿ ನ.23 ರಿಂದ ಕಾಲೇಜುಗಳು ಪುನಾರಂಭವಾಗಲಿದ್ದು, ಈ ಬಗ್ಗೆ ಉನ್ನತ ಶಿಕ್ಷಣ ಸಚಿವರು ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಸಚಿವ ಬೈರತಿ ಬಸವರಾಜ್‌ ತಿಳಿಸಿದರು.

Bhairati Basavaraj
ಸಚಿವ ಬೈರತಿ ಬಸವರಾಜ್

By

Published : Nov 16, 2020, 4:50 PM IST

ದಾವಣಗೆರೆ:ಕಾಲೇಜುಗಳ ಪುನಾರಂಭ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್‌ ಅವರು, ಈ ಬಗ್ಗೆ ಉನ್ನತ ಶಿಕ್ಷಣ ಸಚಿವರು ನಿರ್ಧಾರ ಪ್ರಕಟಿಸಲಿದ್ದು, ಜಿಲ್ಲೆಯಲ್ಲಿ ನ.23 ರಿಂದ ಕಾಲೇಜುಗಳು ಪುನಾರಂಭವಾಗಲಿವೆ ಎಂದು ತಿಳಿಸಿದರು.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಾಲೇಜು ಆರಂಭಿಸಲು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೆಕ್ಕೆಜೋಳ ಹಾನಿಗೆ 500 ಕೋಟಿ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಖರೀದಿ ಕೇಂದ್ರ ಆರಂಭಿಸುವ ಬಗ್ಗೆ ಸಿಎಂ ಜತೆ ಚರ್ಚಿಸಿದ್ದೇನೆ. ನಮ್ಮ ಸರ್ಕಾರ ರೈತರ ಪರವಾಗಿದೆ. ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವ ಚಿಂತನೆ ನಡೆದಿದೆ. ಈ ಬಗ್ಗೆ ಎಲ್ಲ ರೀತಿಯ ಪ್ರಯತ್ನ ಮುಂದುವರೆದಿದೆ ಎಂದು ಮಾಹಿತಿ ನೀಡಿದರು.

ABOUT THE AUTHOR

...view details