ದಾವಣಗೆರೆ :ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ವಿರೋಧಿಸಿ ಜೂನ್ 24 ರಂದು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳಕ್ಕೆ ವಿರೋಧ.. ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್
ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡುತ್ತಿರುವುದನ್ನು ಖಂಡಿಸಿ ದಾವಣಗೆರೆಯ ಜಿಲ್ಲಾ ಕಾಂಗ್ರೆಸ್ನಿಂದ ನಾಳೆ ಪ್ರತಿಭಟನೆ ನಡೆಸಲಿದೆ..
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ನಾಳೆ ನಗರದ 20 ಪೆಟ್ರೋಲ್ ಬಂಕ್ಗಳ ಮುಂದೆ ಕಾಂಗ್ರೆಸ್ನ ಎಲ್ಲಾ ಘಟಕಗಳ ಮುಖಂಡರು, ಪದಾಧಿಕಾರಿಗಳು ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಿದರು.
ಕಳೆದ 15 ದಿನಗಳಿಂದ ನಿತ್ಯವೂ ತೈಲ ಬೆಲೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೆಚ್ಚಳ ಮಾಡುತ್ತಿದೆ. ಇದರಿಂದ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿದೆ. ಹೆಮ್ಮಾರಿ ಕೊರೊನಾ ಬಂದ ಬಳಿಕ ಜನ ಸಾಮಾನ್ಯರ ಬದುಕು ತುಂಬಾನೇ ಕಷ್ಟವಾಗಿದೆ. ಈ ನಡುವೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸುವ ಮೂಲಕ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.