ದಾವಣಗೆರೆ:ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವಅಕ್ರಮ ಕಸಾಯಿಖಾನೆಗಳನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನಾ ಮೆರವಣಿಗೆ ನಡೆಸಿತು.
ದಾವಣಗೆರೆ: ಅಕ್ರಮ ಕಸಾಯಿಖಾನೆಗಳ ತೆರವಿಗೆ ಹಿಂದೂ ಜಾಗರಣ ವೇದಿಕೆ ಆಗ್ರಹ - ಕಸಾಯಿಖಾನೆ ಹಾಗೂ ಬಿಡಾಡಿ ದನಗಳ ನಿಯಂತ್ರಣ ವಿಚಾರ
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಅಕ್ರಮ ಕಸಾಯಿಖಾನೆಗಳನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನಾ ಮೆರವಣಿಗೆ ನಡೆಸಿತು.
ನಗರದ ಹಾಸಭಾವಿ ವೃತ್ತದಿಂದ ಮಹಾನಗರ ಪಾಲಿಕೆವರೆಗೂ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರವು ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿಗೆ ಆಯ್ಕೆಯಾಗಿದೆ. ಆದರೆ ಇಲ್ಲಿ ಅಕ್ರಮ ಕಸಾಯಿಖಾನೆಗಳು ತಲೆ ಎತ್ತುತ್ತಿದ್ದು, ಅವುಗಳಿಂದ ಅಕ್ರಮ ಗೋವು ಸಾಗಾಟ ಎಗ್ಗಿಲ್ಲದೇ ನಡೆಯುತ್ತಿದೆ. ಈ ವಿಚಾರವಾಗಿ ಹಲವು ಭಾರಿ ಕೋಮು ಗಲಭೆಗಳಾಗಿವೆ ಎಂದು ಆರೋಪಿಸಿದರು.
ಅಲ್ಲದೇ ಬಿಡಾಡಿ ದನಗಳನ್ನು ರಾತ್ರಿ ವೇಳೆ ಅಕ್ರಮ ಕಸಾಯಿಖಾನೆಯವರು ಕದ್ದು ಸಾಗಿಸುತ್ತಿದ್ದು, ಈ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಾನೂನು ಬಾಹಿರವಾಗಿ ನಡೆಸುತ್ತಿರುವ ಅಕ್ರಮ ಕಾಸಾಯಿಖಾನೆಗಳನ್ನು ಮುಚ್ಚಿಸಬೇಕು. ಬಿಡಾಡಿ ದನಗಳಿಂದ ರಸ್ತೆ ಅಪಘಾತಗಳು ಹಾಗೂ ಗೋ ಕಳ್ಳತನ ಆಗುವುದನ್ನು ತಪ್ಪಿಸಬೇಕೆಂದು ಆಗ್ರಹಿಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.