ದಾವಣಗೆರೆ:ಹರಿಹರ ತಾಲೂಕಿನ ಹನಗವಾಡಿ ಗ್ರಾಮದಲ್ಲಿನ ವೀರಶೈವ ಲಿಂಗಾಯಿತ ಪಂಚಮಸಾಲಿ ಮಠಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅನೌಪಚಾರಿಕ ಭೇಟಿ ನೀಡಿ ಶ್ರೀಗಳೊಡನೆ ಚರ್ಚಿಸಿದರು.
ಪಂಚಮಸಾಲಿ ಮಠಕ್ಕೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ.. - Panchamsali math
ಹರಿಹರ ತಾಲೂಕಿನ ಹನಗವಾಡಿ ಗ್ರಾಮದಲ್ಲಿನ ವೀರಶೈವ ಲಿಂಗಾಯಿತ ಪಂಚಮಸಾಲಿ ಮಠಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅನೌಪಚಾರಿಕ ಭೇಟಿ ನೀಡಿ ಶ್ರೀಗಳೊಡನೆ ಚರ್ಚಿಸಿದರು.
ಪಂಚಮಸಾಲಿ ಮಠಕ್ಕೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ಹಾವೇರಿಯಿಂದ ಬೆಂಗಳೂರಿಗೆ ತೆರಳುವ ಮಾರ್ಗಮಧ್ಯದಲ್ಲಿ ಹರಿಹರದ ವೀರಶೈವ ಲಿಂಗಾಯತ ಮಠಕ್ಕೆ ಭೇಟಿ ನೀಡಿ, ಶ್ರೀಗಳೊಡನೆ ವಿವಿಧ ವಿಚಾರಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದರು.
ಈ ವೇಳೆ ಮಠದ ಪೀಠಾಧಿಪತಿ ಶ್ರೀ ವಚನಾನಂದ ಮಹಾ ಸ್ವಾಮಿಗಳು, ಟ್ರಸ್ಟಿ ಚಂದ್ರಶೇಖರ್ ಪೂಜಾರ್, ಬಿಜೆಪಿ ಮುಖಂಡ ಪಾಲಾಕ್ಷಗೌಡ, ಕೆಂಚನಹಳ್ಳಿ ಮಾಂತೇಶಪ್ಪ,ಗುತ್ತೂರು ಕರಿಬಸಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಡಿವೈಎಸ್ಪಿ ಮಂಜುನಾಥ್ ಗಂಗಲ್, ಸಿಪಿಐ ಗುರುನಾಥ್, ಪಿಎಸ್ಐ ಡಿ.ರವಿಕುಮಾರ್ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.