ದಾವಣಗೆರೆ: ಹಿಜಾಬ್ ವಿವಾದ ಇದೀಗ ದಾವಣಗೆರೆ ಜಿಲ್ಲೆಗೂ ಹಬ್ಬಿದೆ. ಹೊನ್ನಾಳಿ ತಾಲೂಕಿನ ಸರ್ಕಾರಿ ಪದವಿ ಕಾಲೇಜ್ಗೆ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಆಗಮಿಸಿದ್ದರಿಂದ ಪ್ರಾಂಶುಪಾಲರು ಹಾಗೂ ಸ್ಟೂಡೆಂಟ್ಸ್ ನಡುವೆ ಕೆಲ ಕಾಲ ವಾಗ್ದಾದ ನಡೆಯಿತು.
ತರಗತಿಗೆ ಹಿಜಾಬ್ ಧರಿಸಿಕೊಂಡು ಬರುವುದನ್ನು ನಿಷೇಧಿಸುವಂತೆ ವಿದ್ಯಾರ್ಥಿಗಳು ಮನವಿ ಮಾಡಿದರು. 50 ವಿದ್ಯಾರ್ಥಿಗಳು ಸಹಿ ಮಾಡಿ ಹಿಜಾಬ್ ಧರಿಸಿ ತರಗತಿಗಳಿಗೆ ಬರುವಂತಿಲ್ಲ, ಬುರ್ಖಾ ಧರಿಸಿ ಬಂದರೆ ನಾವು ಕೇಸರಿ ಶಾಲು ಹಾಕಿಕೊಂಡು ಬರುವುದಾಗಿ ಪ್ರಾಂಶುಪಾಲರಿಗೆ ಎಚ್ಚರಿಕೆ ನೀಡಿದ್ದಾರೆ. ಇದಲ್ಲದೇ, ಪ್ರಾಂಶುಪಾಲರಿಗೆ ಮನವಿ ಪತ್ರ ನೀಡುವಾಗಲೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿದ್ದ ದೃಶ್ಯ ಕಂಡುಬಂದಿತು.